ಚಿತ್ರದುರ್ಗ: ವನ್ಯಧಾಮಕ್ಕೆ ಬೆಂಕಿ ಬಿದ್ದು ಅಪಾರ ಪ್ರಮಾಣದ ಅರಣ್ಯ ಸಂಪತ್ತು ನಾಶವಾಗಿರುವ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿ 4ರ ಬಳಿ ನಡೆದಿದೆ.
ಜೋಗಿಮಟ್ಟಿ ವನ್ಯಜೀವಿ ಧಾಮಕ್ಕೆ ಹೊಂದಿಕೊಂಡಿರುವ ಕುರುಮರಡಿಕೆರೆಯ ನ್ಯಾಮಕಲ್ ಗ್ಯಾರೇಜ್ ಹಿಂಭಾಗದ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದ್ದು, ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ಆವರಿಸಿಕೊಂಡಿದ್ದು, ಅಪಾರ ಪ್ರಮಾಣದ ಅರಣ್ಯ ಸಂಪತ್ತು ನಾಶವಾಗಿದೆ.
ಘಟನೆ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮೂರು ವರ್ಷಗಳ ಹಿಂದೆ ಕೂಡ ಇದೇ ರೀತಿ ಆವರಿಸಿದ್ದ ಬೆಂಕಿಯಿಂದ ನೂರಾರು ಎಕರೆ ಅರಣ್ಯ ಪ್ರದೇಶ ಭಸ್ಮವಾಗಿತ್ತು. ಇದೀಗ ಮತ್ತೆ ಅದೇ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಮೂಡುವಂತೆ ಮಾಡಿದೆ.