ETV Bharat / state

ಶ್ರೀರಾಮುಲುಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲು ಒತ್ತಾಯ - ಶ್ರೀರಾಮುಲು

ಬಿಜೆಪಿಯು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶ್ರೀರಾಮುಲು ಅವರನ್ನು ಬಳಸಿಕೊಂಡು ಈಗ ಅಧಿಕಾರ ನೀಡುವ ವೇಳೆಯಲ್ಲಿ ಕೈಬಿಟ್ಟಿದೆ ಎಂದು ನಾಯಕ ಸಮಾಜದ ಪದಾಧಿಕಾರಿಗಳು ಚಿತ್ರದುರ್ಗದಲ್ಲಿ ಆರೋಪಿಸಿದ್ದಾರೆ.

ಶ್ರೀರಾಮುಲುಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲು ಚಿತ್ರದುರ್ಗದಲ್ಲಿ ನಾಯಕ ಸಮಾಜದ ಪದಾಧಿಕಾರಿಗಳು ಪತ್ರಿಕಾಗೋಷ್ಟಿ ನಡೆಸಿದರು.
author img

By

Published : Aug 27, 2019, 11:30 PM IST

ಚಿತ್ರದುರ್ಗ: ಬಿಜೆಪಿ ಮುಖಂಡರು ಶ್ರೀರಾಮುಲು ಅವರನ್ನು ಬಿಜೆಪಿ ಪಕ್ಷಕ್ಕಾಗಿ ಬಳಸಿಕೊಂಡು ಕೈಬಿಟ್ಟಿದ್ದಾರೆ ಎಂದು ನಾಯಕ ಸಮಾಜದ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ದೂರಿದರು.

ಶ್ರೀರಾಮುಲುಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲು ಒತ್ತಾಯ

ಬಿಜೆಪಿ ಹೈಕಮಾಂಡ್ ಶ್ರೀರಾಮುಲು ಅವರಿಗೆ ಕಳೆದ ವಿಧಾನಸಭಾ ಚುನಾವಣೆ ವೇಳೆ 80 ಕ್ಷೇತ್ರದ ಜವಾಬ್ದಾರಿ ನೀಡಿತ್ತು. ಶ್ರೀರಾಮುಲು ತಮ್ಮ ಜವಾಬ್ದಾರಿ ಯಶಸ್ವಿಯಾಗಿ ನಿಭಾಯಿಸಿ ಬಿಜೆಪಿ 104 ಸ್ಥಾನ ಗೆಲ್ಲುವಂತೆ ಮಾಡಿದ್ದಾರೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಶ್ರೀರಾಮುಲು ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡದೆ ಇರುವುದು ಬೇಸರಕ್ಕೆ ಕಾರಣವಾಗಿದೆ. ಇನ್ನು ಲಕ್ಷ್ಮಣ ಸವದಿಯವರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಭಾರತದ ಇತಿಹಾಸದಲ್ಲಿ ಚುನಾವಣೆಯಲ್ಲಿ ಸೋತ ವ್ಯಕ್ತಿಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಟ್ಟಿರುವುದು ಇದೇ ಮೊದಲು. ಅಲ್ಲದೆ ಸ್ವ ಜಾತಿಯ ಮತ್ತೊಬ್ಬ ಸಚಿವರಿಗೆ ಉಪ ಮುಖ್ಯಮಂತ್ರಿ ಸ್ಥಾ‌‌ನ ನೀಡಲಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ನಾಯಕ ಸಮಾಜಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆ ಪೂರ್ವದಲ್ಲಿ ಶ್ರೀರಾಮುಲುಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಬಿಎಸ್​​ವೈ ಹೇಳಿದ್ದರು. ಸಚಿವ ಶ್ರೀರಾಮುಲುಗೆ ಉಪ ಮುಖ್ಯಮಂತ್ರಿ ಸ್ಥಾನ ಮತ್ತು ಹೆಚ್ಚುವರಿ ಖಾತೆ ನೀಡಬೇಕು. ಬಿಜೆಪಿಯು ನಾಯಕ ಸಮಾಜದ ಮೇಲೆ ಶೋಷಣೆ ಮಾಡುತ್ತಿದೆ. ನಾಯಕ ಸಮುದಾಯಕ್ಕೆ ಡಿಸಿಎಂ ಸೇರಿ ನಾಲ್ಕು ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

Intro:ಶ್ರೀ ರಾಮುಲುರನ್ನು ಬಿಜೆಪಿ ಪಕ್ಷ ಬಳಸಿಕೊಂಡು ಬಿಟ್ಟಿದೆ : ನಾಯಕ ಸಮಾಜದ ಅಧ್ಯಕ್ಷ ಕೃಷ್ಣಮೂರ್ತಿ

ಆ್ಯಂಕರ್:- ಬಿಜೆಪಿ ಮುಖಂಡರು ಶ್ರೀರಾಮುಲು ಅವರನ್ನು ಬಿಜೆಪಿ ಪಕ್ಷ ಬಳಸಿಕೊಂಡು ಕೈಬಿಟ್ಟಿದೆ ಎಂದು
ನಾಯಕ ಸಮಾಜದ ಜಿಲ್ಲಾಧ್ಯಕ್ಷ ಎಚ್.ಜೆ.ಕೃಷ್ಣಮೂರ್ತಿ ಹೇಳಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ಹೈಕಮಾಂಡ್ ರಾಮುಲುರವರಿಗೆ ವಿಧಾನಸಭಾ ಚುನಾವಣೆ ವೇಳೆ 80 ಕ್ಷೇತ್ರದ ಜವಾಬ್ದಾರಿ ನೀಡಿದ್ರು. ಶ್ರೀರಾಮುಲು ತಮ್ಮ ಜವಾಬ್ದಾರಿ ಯಶಸ್ವಿಯಾಗಿ ನಿಭಾಯಿಸಿ ಬಿಜೆಪಿ 104 ಸ್ಥಾನ ಗೆಲ್ಲುವಂತೆ ಮಾಡಿದ್ದಾರೆ ಅದ್ರೂ ಉಪ ಮುಖ್ಯಮಂತ್ರಿ ಸ್ಥಾನ ನೀಡದೆ ಇರುವುದು ಬೇಸರಕ್ಕೆ ಕಾರವಾಗಿದೆ ಎಂದರು. ಇನ್ನೂ ಲಕ್ಷ್ಮಣ ಸವದಿಯವರ ಬಗ್ಗೆ ಪ್ರತಿಕ್ರಿಯಿಸಿದ ಅವರು ಭಾರತದ ಇತಿಹಾಸದಲ್ಲಿ ಸೋತ ವ್ಯಕ್ತಿಗೆ ಉಪ ಮುಖ್ಯಮಂತ್ರಿ  ಸ್ಥಾನ ಕೊಟ್ಟಿರೋದು ಇದೇ ಮೊದಲು, ಅಲ್ಲದೆ ಸ್ವ ಜಾತಿಯ ಮತ್ತೊಬ್ಬ ಸಚಿವರಿಗೆ ಉಪ ಮುಖ್ಯಮಂತ್ರಿ ಸ್ಥಾ‌‌ನ ನೀಡಲಾಗಿದೆ. ಸಿಎಂ ಬಿಎಸ್ ಯಡಿಯೂರಪ್ಪ ನಾಯಕ ಸಮಾಜಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದರು. ಚುನಾವಣೆ ಪೂರ್ವದಲ್ಲಿ ಶ್ರೀರಾಮುಲುಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಬಿಎಸ್ ವೈ ಹೇಳಿದ್ರು. ಸಚಿವ ಶ್ರೀರಾಮುಲುಗೆ ಉಪ ಮುಖ್ಯಮಂತ್ರಿ ಸ್ಥಾನ ಮತ್ತು ಹೆಚ್ಚುವರಿ ಖಾತೆ ನೀಡ್ಬೇಕು.
ಬಿಜೆಪಿ ನಾಯಕ ಸಮಾಜದ ಮೇಲೆ ಶೋಷಣೆ ಮಾಡುತ್ತಿದೆ.
ನಾಯಕ ಸಮುದಾಯಕ್ಕೆ ಡಿಸಿಎಂ ಸೇರಿ ನಾಲ್ಕು ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ಬೈಟ್01:- ಎಚ್.ಜೆ.ಕೃಷ್ಣಮೂರ್ತಿ, ನಾಯಕ ಸಮಾಜದ ಜಿಲ್ಲಾಧ್ಯಕ್ಷBody:RamaluConclusion:Dcm
ETV Bharat Logo

Copyright © 2024 Ushodaya Enterprises Pvt. Ltd., All Rights Reserved.