ಚಿತ್ರದುರ್ಗ: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದ ಮಾಜಿ ಸಚಿವರಾದ ಡಿ. ಮಂಜುನಾಥ್ ಅವರ ಪಾರ್ಥಿವ ಶರೀರ, ಜಿಲ್ಲೆಯ ಹಿರಿಯೂರಿಗೆ ಆಗಮಿಸಿದೆ.
ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಹಿರಿಯೂರಿನ ನೆಹರು ಕ್ರೀಡಾಂಗಣದಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಅಪಾರ ಅಭಿಮಾನಿಗಳು ಬಂದು ಅಂತಿಮ ದರ್ಶನ ಪಡೆಯಲು ಸಕಲ ಸಿದ್ಧತೆ ಮಾಡಲಾಗಿದೆ.
ಪಾರ್ಥಿವ ಶರೀರ ಆಗಮಿಸುತ್ತಿದ್ದಂತೆ ಅಭಿಮಾನಿಗಳ ದಂಡು ನೆಹರು ಕ್ರೀಡಾಂಗಣದತ್ತ ಆಗಮಿಸುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ನೆಹರು ಕ್ರೀಡಾಂಗಣದಲ್ಲಿ ಅಂತಿಮ ದರ್ಶನದ ಬಳಿಕ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಗಾಯತ್ರಿಪುರ ಗ್ರಾಮದ ಅವರ ತೋಟದಲ್ಲಿ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಗುವುದು.