ಚಿತ್ರದುರ್ಗ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಾ ಸಾಗುತ್ತಿದೆ. ಇದೀಗ ಹಿರಿಯೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಡಿ. ಸುಧಾಕರ್ ಹೆಸರು ಸೇರಿಕೊಂಡಿದ್ದು ಕುತೂಹಲ ಕೆರಳಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನಾನು ಸಿಡಿ ಲೇಡಿಗೆ ಯಾವುದೇ ಹಣ ವರ್ಗಾವಣೆ ಮಾಡಿಲ್ಲ. ಇದು ಸತ್ಯಕ್ಕೆ ದೂರವಾದದ್ದು. ಒಬ್ಬ ಮಾಜಿ ಸಚಿವನಾಗಿರುವ ನನಗೆ ಪ್ರತಿದಿನ ಅನೇಕ ಜನರು ಕರೆ ಮಾಡುತ್ತಿರುತ್ತಾರೆ. ಹಾಗಂತ ಸಿಡಿ ಲೇಡಿಗೂ ನನಗೂ ಯಾವುದೇ ಸಂಪರ್ಕ ಇಲ್ಲ. ಎಸ್ಐಟಿ ತನಿಖಾಧಿಕಾರಿಗಳು ನನ್ನನ್ನು ಕರೆದರೆ ನಾನು ಉತ್ತರಿಸುತ್ತೇನೆ ಎಂದು ಹೇಳಿದರು.
ಸಿಡಿ ಕೇಸ್ನಲ್ಲಿ ಮಾಜಿ ಸಚಿವರೊಬ್ಬರಿದ್ದಾರೆ ಎಂದು ಸುದ್ದಿ ಹರಿದಾಡುತ್ತಿತ್ತು. ನನಗೆ ಭಯ ಇದ್ದಿದ್ದರೆ ಮೊದಲೇ ಇಂಜಕ್ಷನ್ ಆರ್ಡರ್ ತೆಗೆದುಕೊಳ್ಳುತ್ತಿದ್ದೆ ಎಂದರು. ನನ್ನ ಹೆಸರು ತಳಕು ಹಾಕಿಕೊಂಡಿದ್ದು ಕೇಳಿ ಆಶ್ಚರ್ಯವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ರಮೇಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಲ್ಲರೂ ನನಗೆ ಪರಮಾಪ್ತರು, ನನಗೆ ರಾಜಕೀಯದಲ್ಲಿ ವಿರೋಧಿಗಳಿಲ್ಲ ಎಂದು ಸುಧಾಕರ್ ತಿಳಿಸಿದರು.
ಇದನ್ನೂ ಓದಿ: ಸಿಡಿ ಪ್ರಕರಣಕ್ಕೆ ಟ್ವಿಸ್ಟ್: ಯುವತಿ-ಮಾಜಿ ಸಚಿವರೊಂದಿಗೆ ನಡೆದಿತ್ತಂತೆ ಕರೆ ವಿನಿಮಯ, ಹಣದ ವ್ಯವಹಾರ!