ಚಿತ್ರದುರ್ಗ: ಕಾರು - ಕ್ರೂಸರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿ, 7 ಮಂದಿ ಗಾಯಗೊಂಡಿರುವ ಘಟನೆ ಹೊಸದುರ್ಗ ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ನಡೆದಿದೆ.
ಚಿತ್ರದುರ್ಗದಲ್ಲಿ ನಡೆದ ಶೋಭಯಾತ್ರೆ ಮುಗಿಸಿ ಹಿಂದಿರುಗುತ್ತಿದ್ದಾಗ ಇಂದು ಬೆಳಗಿನಜಾವ ಈ ಅಪಘಾತ ಸಂಭವಿಸಿದೆ. ಕ್ರೂಸರ್ನಲ್ಲಿದ್ದ ಹಾಸನ ಜಿಲ್ಲೆ ಅರಸೀಕೆರೆ ಮೂಲದ ಲೋಕೇಶ್ ಸಾವನ್ನಪ್ಪಿದ್ದರೆ, ಇತ್ತ ಹೊಸದುರ್ಗದಿಂದ ಬರುತ್ತಿದ್ದ ಕಾರಿನಲ್ಲಿದ್ದ ಅರಸೀಕೆರೆ ಮೂಲದ ಗೌತಮ್ ಸಿಂಗ್, ಮದನ್ ಸಿಂಗ್, ಮುಖೇಶ್ ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಅಪಘಾತದಲ್ಲಿ ಏಳು ಜನರಿಗೆ ಗಾಯಗಳಾಗಿದ್ದು, ಹೊಸದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸದುರ್ಗ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.