ETV Bharat / state

ಕೆಎಸ್‌ಆರ್‌ಟಿಸಿ ಉದ್ಯೋಗದ ಆಮಿಷ ತೋರಿಸಿ ವಂಚನೆ: ಹೊಸದುರ್ಗದಲ್ಲಿ ಐವರ ಬಂಧನ

author img

By

Published : Oct 27, 2021, 9:30 AM IST

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (ಕೆಎಸ್‌ಆರ್‌ಟಿಸಿ) ಉದ್ಯೋಗ ಕೊಡಿಸುವುದಾಗಿ ಹೇಳಿ ವಂಚಿಸಿದ ಐವರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ.

5 arrested in fraud case
ಹೊಸದುರ್ಗದಲ್ಲಿ ವಂಚಕರು ಅರೆಸ್ಟ್

ಚಿತ್ರದುರ್ಗ: ಕೆಎಸ್​ಆರ್​ಟಿಸಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ನಕಲಿ ದಾಖಲೆ ಸೃಷ್ಟಿಸಿ 70 ಲಕ್ಷ ರೂಪಾಯಿ ವಂಚಿಸಿದ್ದ ಐವರನ್ನು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಅರೆಸ್ಟ್‌ ಮಾಡಲಾಗಿದೆ.

2019ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಂಚಾರಿ ನಿರೀಕ್ಷಕರು, ಸಹಾಯಕ ಸಂಚಾರಿ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ವಂಚಕರು ಈ ಕೃತ್ಯ ಎಸಗಿದ್ದಾರೆ. ಈ ಕುರಿತು ಹೊಸದುರ್ಗ ನಿವಾಸಿ ಅಭಿಷೇಕ್ ಅಕ್ಟೋಬರ್ 9 ರಂದು ಪೊಲೀಸರಿಗೆ ದೂರು ನೀಡಿದ್ದರು.

ವಂಚನೆ ಪ್ರಕರಣದ ಬಗ್ಗೆ ಎಸ್ಪಿ ರಾಧಿಕಾ ಪ್ರತಿಕ್ರಿಯೆ

ಬಾದಾಮಿ ತಾಲೂಕಿನ ಕುಟುಕನಕೇರಿ ಗ್ರಾಮದ ಮಹಮದ್ ಅಲ್ಲಾ ಸಾಬ್, ಸುಭಾಷ್ ಕಾಲೋನಿಯ ಬಸವರಾಜ್, ಬಾಗಲಕೋಟೆಯ ವೀರಭದ್ರಪ್ಪ ಸೋಮಲಿಂಗಪ್ಪ ಅರಗಿನಶೆಟ್ಟಿ, ಹಗರಿಬೊಮ್ಮನಹಳ್ಳಿ ತಾಲೂಕಿನ ಕೋಗಳಿ ತಾಂಡಾದ ಮಂಜುನಾಥ್ ಹಾಗು ಬೆಂಗಳೂರಿನ ಆರ್​ಪಿಸಿ ಲೇಔಟ್​​ನ ಅನಿಲ್ ಕುಮಾರ್ ಬಂಧಿತರು.

ಈ ಆರೋಪಿಗಳು ಬೆಂಗಳೂರು, ಚಿತ್ರದುರ್ಗ ಸೇರಿದಂತೆ ಅನೇಕ ಕಡೆ ವಂಚನೆ ಎಸಗಿರುವುದು ಬೆಳಕಿಗೆ ಬಂದಿದೆ. 12 ಲಕ್ಷ ರೂಪಾಯಿ ನಗದು, ಕೃತ್ಯಕ್ಕೆ ಬಳಸಿದ್ದ 5 ಲಕ್ಷ ರೂ. ಮೌಲ್ಯದ ಕಾರು, ನಕಲಿ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಸರಕಾರವನ್ನು ನಾಲಾಯಕ್‌ ಎಂದ ಎಂಇಎಸ್‌ ಪುಂಡರಿಗೆ ತಕ್ಕ ಶಾಸ್ತಿ ಮಾಡಿ: ಹೆಚ್​ಡಿಕೆ

ವಿಕಾಸಸೌಧ, ವಿಧಾನಸೌಧದಲ್ಲಿ ನಮಗೆ ಉನ್ನತಾಧಿಕಾರಿಗಳು ಪರಿಚಯವಿದ್ದಾರೆ. ಖಂಡಿತ ಉದ್ಯೋಗ ಕೊಡಿಸುತ್ತೇವೆ ಎಂದು ಹೇಳಿ ಉದ್ಯೋಗಾಕಾಂಕ್ಷಿಗಳನ್ನು ನಂಬಿಸಿ ಹಣ ಪಡೆದಿದ್ದಾರೆ. ಅಲ್ಲದೇ ಹಂಗರಿ ಬೊಮ್ಮನಹಳ್ಳಿ ಕೆಎಸ್‌ಆರ್‌ಟಿಸಿ ಕಚೇರಿ ಬಳಿ ಸಂದರ್ಶನ ಮಾದರಿಯಲ್ಲಿ ನಾಟಕ ಮಾಡಿದ್ದಾರೆಂದು ತಿಳಿದುಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.