ಚಿತ್ರದುರ್ಗ: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೊರೊನಾ ವಾರಿಯರ್ಸ್ಗೆ ವಿಧಾನ ಪರಿಷತ್ ಸದಸ್ಯ ಜಿ.ರಘು ಆಚಾರ್ ಸೀರೆ ನೀಡಿ ಅಭಿನಂದಿಸಿದ್ದಾರೆ.
ಮಹಾಮಾರಿ ಕೊರೊನಾ ಹಾವಳಿಯಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡಲು ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್ಗೆ ಪ್ರೋತ್ಸಾಹಿಸಿ ಗೌರವ ಸಲ್ಲಿಸಿದರು.
ಜಿಲ್ಲೆ ಶೀಘ್ರದಲ್ಲಿ ಕೊರೊನಾ ಮುಕ್ತವಾಗಲಿ ಎಂದು ಹಾರೈಸಿರುವ ಅವರು, ಎಲ್ಲರಿಗೂ ಗೌರಿ ಮತ್ತು ಗಣೇಶ ಹಬ್ಬದ ಶುಭಾಶಯ ಕೋರಿದರು.
ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್ಗೆ ಸೀರೆಗಳನ್ನು ಎನ್.ಎಸ್.ಯು.ಐ . ರಾಷ್ಟ್ರೀಯ ಕಾರ್ಯದರ್ಶಿ ಮಮತಾ ನೇರ್ಲಿಗೆ ವಿತರಣೆ ಮಾಡಿ ಶುಭ ಹಾರೈಸಿದರು.
ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಾಲಾಕ್ಷ, ಡಿ.ಎಸ್.ಬಸವಾರಾಜ್ ಕೋವಿಡ್ ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.