ಚಿತ್ರದುರ್ಗ: ಕೊರೊನಾ ವೈರಸ್ ಭೀತಿ ಪ್ರತಿಯೊಬ್ಬರಲ್ಲೂ ಮನೆ ಮಾಡುತ್ತಿದ್ದು, ಇದರ ಪರಿಣಾಮ ನಿರಾಶ್ರಿತರ ಕೇಂದ್ರದ ಭಿಕ್ಷುಕರ ಆರೋಗ್ಯ ತಪಾಸಣೆ ಮಾಡಲಾಯಿತು.
ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ಈ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಸಿಬ್ಬಂದಿಯನ್ನೊಗೊಂಡ ತಂಡ ಗೋನೂರು ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ 297 ಭಿಕ್ಷುಕರ ಆರೋಗ್ಯವನ್ನು ಮುಂಜಾಗ್ರತಾ ಕ್ರಮವಾಗಿ ತಪಾಸಣೆ ಮಾಡಲಾಯಿತು.
ಚಿತ್ರದುರ್ಗ ತಾಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ.ಗಿರೀಶ್, ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾತನಾಡಿ ಕೈಗಳನ್ನು ಸ್ಬಚ್ಛವಾಗಿ ಸಾಬೂನಿನಿಂದ ತೊಳೆದುಕೊಳ್ಳಿ. ಬಳಿಕ ಜ್ವರ, ತಲೆನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ ಕಂಡು ಬಂದಲ್ಲಿ ತಕ್ಷಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಿಳಿಸಬೇಕು ಎಂದು ನಿರಾಶ್ರಿತರಲ್ಲಿ ಮನವಿ ಮಾಡಿದರು.