ETV Bharat / state

ಗ್ರಾಪಂ ಚುನಾವಣೆ: ಬಿಜೆಪಿಯಿಂದ ಹೊಳಲ್ಕೆರೆ, ಚಳ್ಳಕೆರೆಯಲ್ಲಿ ಗ್ರಾಮ ಸ್ವರಾಜ್​ ಸಮಾವೇಶ - Gram Swarajya Convention

ಬಿಜೆಪಿ ಪಕ್ಷ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹಾಗೂ ಹೊಳಲ್ಕೆರೆ ಮತ‌ ಕ್ಷೇತ್ರಗಳಲ್ಲಿ ಗ್ರಾಮ ಸ್ವರಾಜ್​ ಸಮಾವೇಶಗಳನ್ನು ಹಮ್ಮಿಕೊಳ್ಳುವ ಮೂಲಕ ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬುವ ಕಾರ್ಯಕ್ಕೆ ಮುಂದಾಗಿದೆ.

chitradurga
ಗ್ರಾಮ ಸ್ವರಾಜ್ಯ ಸಮಾವೇಶ
author img

By

Published : Nov 28, 2020, 5:26 PM IST

ಚಿತ್ರದುರ್ಗ: ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಬಿಜೆಪಿ ಪಕ್ಷ ಸಮಾವೇಶಗಳನ್ನು ಕೈಗೊಂಡು ರಣಕಹಳೆ ಮೊಳಗಿಸಿದೆ.

ಗ್ರಾಮ ಪಂಚಾಯಿತಿಗಳಲ್ಲೂ ಅಧಿಕಾರದ ಗದ್ದುಗೆ ಹಿಡಿಯಲು ಬಿಜೆಪಿ ತಂತ್ರಗಳನ್ನು ರೂಪಿಸುತ್ತಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹಾಗೂ ಹೊಳಲ್ಕೆರೆ ಮತ‌ ಕ್ಷೇತ್ರಗಳಲ್ಲಿ ಗ್ರಾಮ ಸ್ವರಾಜ್​ ಸಮಾವೇಶಗಳನ್ನು ಹಮ್ಮಿಕೊಳ್ಳುವ ಮೂಲಕ ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬುವ ಕಾರ್ಯಕ್ಕೆ ಮುಂದಾಗಿದೆ.

ಡಿಸಿಎಂ ಲಕ್ಷ್ಮಣ್ ಸವದಿ

ಇಂದು ನಡೆದ ಸಮಾವೇಶದಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವ ಆನಂದ್ ಸಿಂಗ್, ಸಂಸದ ಪ್ರತಾಪ್ ಸಿಂಹ, ಸಂಸದ ಎ.ನಾರಾಯಣ ಸ್ವಾಮಿ, ಶ್ರೀರಾಮುಲು ಭಾಗಿಯಾಗಿ ಗ್ರಾಮ ಪಂಚಾಯಿತಿ ಚುನಾವಣೆಗೆ ಹೊಳಲ್ಕೆರೆಯಿಂದ ರಣಕಹಳೆ ಊದಿದರು.

ನಾಳೆ ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲೂ ಸಮಾವೇಶಗಳನ್ನು ಮಾಡಲಾಗುತ್ತಿದ್ದು, ಪಕ್ಷವನ್ನು ತಳಮಟ್ಟದಿಂದ ಗಟ್ಟಿಗೊಳಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಈ ಸಮಾವೇಶ ಕೈಗೊಳ್ಳಲಾಗುತ್ತಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.