ETV Bharat / state

ಚಿತ್ರದುರ್ಗ: ವಿದ್ಯಾರ್ಥಿನಿ ಮೇಲೆ ಆ್ಯಸಿಡ್​ ಚೆಲ್ಲಿದ ಆರೋಪ, ಮುಖ್ಯ ಶಿಕ್ಷಕ ಅಮಾನತು

ಶೌಚಾಲಯ ಸ್ವಚ್ಛತಾ ಸಮಯದಲ್ಲಿ ವಿದ್ಯಾರ್ಥಿನಿ ಮೇಲೆ ಆ್ಯಸಿಡ್​ ಚೆಲ್ಲಿದ ಆರೋಪದ ಮೇಲೆ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ.

ಆಸಿಡ್​ ಎರಚಿದ ಆರೋಪದಡಿ ಮುಖ್ಯ ಶಿಕ್ಷಕ ಅಮಾನತು

author img

By ETV Bharat Karnataka Team

Published : Oct 27, 2023, 6:12 PM IST

Updated : Oct 27, 2023, 11:01 PM IST

ಚಿತ್ರದುರ್ಗ: ವಿದ್ಯಾರ್ಥಿನಿ ಮೈಮೇಲೆ‌ ಆ್ಯಸಿಡ್​ ಚೆಲ್ಲಿದ ಆರೋಪದಡಿ ಮುಖ್ಯ ಶಿಕ್ಷಕ ರಂಗಸ್ವಾಮಿ ಎಂಬವರನ್ನು ಚಿತ್ರದುರ್ಗ ಡಿಡಿಪಿಐ ರವಿಶಂಕರ ರೆಡ್ಡಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ‌. ಜೋಡಿ ಚಿಕ್ಕೇನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅಕ್ಟೋಬರ್ 25ರಂದು ಶಾಲಾ ಶೌಚಾಲಯ ಸ್ವಚ್ಛಗೊಳಿಸಲು ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ 2 ನೇ‌ ತರಗತಿ ವಿದ್ಯಾರ್ಥಿನಿ‌ಯ ಮೇಲೆ ರಂಗಸ್ವಾಮಿ ಆ್ಯಸಿಡ್ ಎರಚಿದ್ದಾರೆ ಎಂದು ಪೋಷಕರು ಆರೋಪಿಸಿದ್ದರು. ಬಾಲಕಿಯ ಬೆನ್ನಿಗೆ ಗಾಯವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಮುಖ್ಯಶಿಕ್ಷಕ ರಂಗಸ್ವಾಮಿ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ​ ದಾಖಲಿಸಲಾಗಿದೆ. ಇದರ ಬೆನ್ನಲ್ಲೇ‌ ಡಿಡಿಪಿಐ, ಮುಖ್ಯ ಶಿಕ್ಷಕ‌ ರಂಗಸ್ವಾಮಿ ವಿರುದ್ಧ ಕರ್ತವ್ಯ ನಿರ್ಲಕ್ಷ್ಯ ಹಾಗು ಬೇಜವಾಬ್ದಾರಿತನದ ಆರೋಪದಡಿ ಶಿಸ್ತು ಕ್ರಮ ಕೈಗೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ: ದಸರಾ ರಜೆ ಬಳಿಕ 25ಕ್ಕೆ ಶಾಲೆ ಆರಂಭವಾಗಿದೆ. ಶಾಲಾ ಶೌಚಾಲಯ ಸ್ವಚ್ಛಗೊಳಿಸಲು ಶಿಕ್ಷಕ ಹಾಗೂ ಮಕ್ಕಳು ಸೇರಿದ್ದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಚೆಲ್ಲಿದ್ದಾರೆ ಎಂಬ ಆರೋಪವಿದೆ. ಘಟನೆಯಲ್ಲಿ ವಿದ್ಯಾರ್ಥಿನಿಯ ಬೆನ್ನಿನ ಮೇಲೆ ಸುಟ್ಟ ಗಾಯಗಳಾಗಿತ್ತು.

ಇದನ್ನೂ ಓದಿ: ಕೋಲಾರ: ದರೋಡೆ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರಿಂದ ಗುಂಡೇಟು

Last Updated : Oct 27, 2023, 11:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.