ಚಿತ್ರದುರ್ಗ: ಬಂದ್ ಆಗಿರುವ ಖಾಸಗಿ ಆಸ್ಪತ್ರೆಗಳು ತಕ್ಷಣ ತೆರೆಯಬೇಕು, ಖಾಸಗಿ ಆಸ್ಪತ್ರೆಗಳು ತೆರೆಯದಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಸಿದರು.
ಕೋವಿಡ್-19 ನಿಯಂತ್ರಣಕ್ಕೆ ಮಾಡಲಾಗಿರುವ ಪ್ರತ್ಯೇಕ ಆಸ್ಪತ್ರೆಗೆ ಆರೋಗ್ಯ ಸಚಿವ ಶ್ರೀರಾಮುಲು ಭೇಟಿ ನೀಡಿ ಆಸ್ಪತ್ರೆ ಪರಿಶೀಲಿಸಿ ನಗರದಲ್ಲಿ ಕೋವಿಡ್-19 ಕುರಿತು ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಆರೋಗ್ಯ ಸಿಬ್ಬಂದಿ ಹಾಗೂ ನರ್ಸ್ಗಳು ಬಾಡಿಗೆ ಮನೆ ಬಿಡಿಸಲು ಮುಂದಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದೇನೆ. ಮನೆಯನ್ನು ಖಾಲಿ ಮಾಡಿಸುವವರ ವಿರುದ್ಧ ಆಯಾ ಜಿಲ್ಲಾ ಎಸ್ಪಿಗಳು ಕ್ರಮಕ್ಕೆ ಮುಂದಾಗುವಂತೆ ಸೂಚಿಸಿದ್ದೇನೆ. ಕೊರೊನಾ ವಿರುದ್ಧ ಹೋರಾಡುತ್ತಿರುವ ಸ್ಟಾಫ್ ನರ್ಸ್ ಗಳಿಗೆ ತೊಂದರೆ ಕೊಟ್ಟರೆ ಕಠಿಣ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.