ETV Bharat / state

ಕೋಟೆನಾಡಿನಲ್ಲಿ ಮಳೆಯ ಆರ್ಭಟಕ್ಕೆ ಕೊಚ್ಚಿ ಹೋದ ಟ್ರ್ಯಾಕ್ಟರ್ - ವಿಡಿಯೋ

ಕೋಟೆನಾಡಿನಲ್ಲಿ ವರುಣ ಅಬ್ಬರಿಸಿದ್ದಾನೆ. ಮಳೆ ಆರ್ಭಟದಿಂದ ರಭಸವಾಗಿ ಹರಿಯುತ್ತಿರುವ ಹಳ್ಳದಲ್ಲಿ ಟ್ರ್ಯಾಕ್ಟರ್​ವೊಂದು ಚಾಲಕನ ಸಮೇತ ಕೊಚ್ಚಿ ಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮಳೆಯ ಆರ್ಭಟಕ್ಕೆ ಕೊಚ್ಚಿ ಹೋದ ಟ್ರಾಕ್ಟರ್
ಮಳೆಯ ಆರ್ಭಟಕ್ಕೆ ಕೊಚ್ಚಿ ಹೋದ ಟ್ರಾಕ್ಟರ್
author img

By

Published : Sep 10, 2020, 9:47 AM IST

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಹಳ್ಳವನ್ನು ದಾಟುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಕೊಚ್ಚಿ ಹೋಗಿದ್ದು, ಟ್ರ್ಯಾಕ್ಟರ್ ನಲ್ಲಿದ್ದ ನಾಲ್ಕು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಳೆಯ ಆರ್ಭಟಕ್ಕೆ ಕೊಚ್ಚಿ ಹೋದ ಟ್ರ್ಯಾಕ್ಟರ್

ಜಿಲ್ಲೆಯ ಚಳ್ಳಕರೆ ತಾಲೂಕಿನ ಚಿಗತನಹಳ್ಳಿ ಗ್ರಾಮದ ಹಳ್ಳದಲ್ಲಿ ಈ ಘಟನೆ‌ ನಡೆದಿದ್ದು, ನಿನ್ನೆ ರಾತ್ರಿ ಸುರಿದ ಮಳೆಗೆ ಹಳ್ಳ ತುಂಬಿದ್ದು, ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ಟ್ರ್ಯಾಕ್ಟರ್ ಟ್ರಾಕ್ಟರ್ ಕೊಚ್ಚಿ ಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟ್ರ್ಯಾಕ್ಟರ್ ಹೊರ ತೆಗೆಯಲು ಗ್ರಾಮಸ್ಥರು ಮುಂದಾಗಿದ್ದಾರೆ.

ಜಿಲ್ಲೆಯ ಹಿರಿಯೂರು ತಾಲೂಕಿನ ದೇವರಕೊಟ್ಟ ಗ್ರಾಮದ ಬಳಿ ನೀರಿನ ರಭಸಕ್ಕೆ ಚೆಕ್ ಡ್ಯಾಮ್ ಕೊಚ್ಚಿಹೋಗಿದೆ. ವೇದಾವತಿ‌ ನದಿಗೆ ಅಡ್ಡಲಾಗಿ‌ ನಿರ್ಮಿಸಲಾಗಿದ್ದ ಚೆಕ್ ಡ್ಯಾಮ್ ಇದಾಗಿದ್ದು, ಒಂದೇ‌ ಮಳೆಗೆ ಡ್ಯಾಂ ನೀರು ಪಾಲಾಗಿರುವುದು ಕಳಪೆ‌ ಕಾಮಗಾರಿ ನಡೆದಿದೆ ಎಂದು ಸ್ಥಳೀಯರು‌ ಆರೋಪಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.