ETV Bharat / state

ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಗಾಗಿ ರಸ್ತೆ ಸಂಚಾರ ಮಾರ್ಗ ಬದಲಾವಣೆ: ಡಿಸಿ ಆದೇಶ - Chitradurga latest news

ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿಯ ವಿಸರ್ಜನಾ ಮೆರವಣಿಗೆ ಸೆ.12ರಂದು ನಡೆಯಲಿದ್ದು, ಅಂದು ನಗರದಲ್ಲಿ ವಾಹನಗಳ ಸಂಚಾರದ ಮಾರ್ಗವನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ 
ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ 
author img

By

Published : Sep 11, 2020, 3:43 PM IST

ಚಿತ್ರದುರ್ಗ: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪ್ರತಿಷ್ಠಾಪಿಸಲ್ಪಟ್ಟಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಸೆ.12ರಂದು ನಡೆಯಲಿದ್ದು, ನಗರದಲ್ಲಿನ ರಸ್ತೆ ಸಂಚಾರದ ಮಾರ್ಗವನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಆದೇಶಿಸಿದ್ದಾರೆ.

ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಯು ನಗರದಲ್ಲಿ ಹಾದು ಹೋಗಿರುವ ಮುಖ್ಯ ರಸ್ತೆಯಾದ ಬಿ.ಡಿ.ರಸ್ತೆಯಲ್ಲಿ ಸಾಗಿ ಹೊಳಲ್ಕೆರೆ ರಸ್ತೆ ಮುಖಾಂತರ ಹೋಗಲಿದ್ದು, ವಿಸರ್ಜನಾ ಮೆರವಣೆಗೆಯಲ್ಲಿ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ. ಮೆರವಣಿಗೆ ಸಮಯದಲ್ಲಿ ನಗರದಲ್ಲಿನ ರಸ್ತೆಗಳಲ್ಲಿ ಸಂಚರಿಸುತ್ತಿರುವ ವಾಹನಗಳು ನಗರದ ಮುಖ್ಯರಸ್ತೆ ಹಾಗೂ ಇತರೆ ರಸ್ತೆಗಳಲ್ಲಿ ಸಂಚರಿಸಲು ಸಾಧ್ಯವಾಗದ ಕಾರಣ ಸೆ.12 ರಂದು ನಗರದಲ್ಲಿ ಸಂಚರಿಸುವ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶ ಹೊರಡಿಸಲಾಗಿದೆ.

ಮದ್ಯ ಮಾರಾಟ ನಿಷೇಧ :

ಸೆ. 12ರಂದು ಹಿಂದೂ ಮಹಾ ಗಣಪತಿ ವಿಗ್ರಹ ವಿಸರ್ಜನಾ ಮೆರವಣಿಗೆ ಪ್ರಯುಕ್ತ ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಸಲುವಾಗಿ ಸೆ. 11ರಂದು ಮಧ್ಯಾಹ್ನ 2 ಗಂಟೆಯಿಂದ ಸೆ.13ರ ಬೆಳಿಗ್ಗೆ 6 ಗಂಟೆಯವರೆಗೆ ತಾಲೂಕಿನಾದ್ಯಂತ ಬರುವ ಎಲ್ಲಾ ಬಗೆಯ ಮದ್ಯ ಮಾರಾಟದ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.