ETV Bharat / state

ಮದುವೆಯಾದ ಎರಡೇ ತಿಂಗಳಿಗೆ ಪತ್ನಿ ಹೆಣ ಉರುಳಿಸಿದ ಪತಿ: ಅಕ್ರಮ ಸಂಬಂಧ ಪ್ರಶ್ನಿಸಿದ್ದೇ ತಪ್ಪಾ?! - chitradurga murder

ಆರೋಪಿ ಪತಿ ಚಂದ್ರಪ್ಪನಿಗೆ ಇದ್ದ ಬೇರೆ ಮಹಿಳೆಯೊಂದಿಗಿನ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ವೇಲ್​ನಿಂದ ಬಿಗಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ಪತ್ನಿ ನೇಣು ಹಾಕಿಕೊಂಡಿದ್ದಾಳೆ ಎಂದು ಬಿಂಬಿಸಲು ಮುಂದಾಗಿ ಸಿಕ್ಕಿಬಿದ್ದಿದ್ದಾನೆ. ಚಿತ್ರದುರ್ಗ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.

accused
accused
author img

By

Published : Jul 30, 2020, 3:02 PM IST

Updated : Jul 30, 2020, 3:18 PM IST

ಚಿತ್ರದುರ್ಗ: ಮದುವೆಯಾದ ಎರಡೇ ತಿಂಗಳಲ್ಲಿ ಪತ್ನಿಯನ್ನು ಪಾಪಿ ಪತಿವೋರ್ವ ಕೊಲೆಗೈದಿರುವ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಮೆಟ್ಟಿಲಹೊಳೆ ಗ್ರಾಮದಲ್ಲಿ ನಡೆದಿದೆ.

2020ರ ಮೇ 28ರಂದು ಮದುವೆಯಾಗಿದ್ದು, 2020ರ ಜುಲೈ 28ರಂದು ಪತಿ ಕೊಲೆಗೈದಿದ್ದಾನೆ. ಉಮಾ(19) ಕೊಲೆಯಾಗಿರುವ ನವ ವಿವಾಹಿತೆ. ಚಂದ್ರಪ್ಪ (27) ಕೊಲೆಗೈದಿರುವ ಪತಿ.

ಮದುವೆಯಾದ ಎರಡೇ ತಿಂಗಳಿಗೆ ಪತ್ನಿಯನ್ನು ಕೊಂದ ಪತಿ

ಬೇರೊಬ್ಬಳೊಂದಿಗಿನ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ವೇಲ್​ನಿಂದ ಕುತ್ತಿಗೆ ಬಿಗಿದು ಪತ್ನಿ ಉಮಾಳನ್ನು ಕೊಲೆಗೈದಿದ್ದಾನೆ. ಬಳಿಕ ಪತ್ನಿ ನೇಣು ಹಾಕಿಕೊಂಡಿದ್ದಾಳೆ ಎಂದು ಬಿಂಬಿಸಲು ಮುಂದಾಗಿದ್ದ. ಚಿತ್ರಹಳ್ಳಿ ಠಾಣೆ ಪೊಲೀಸರು ಕೊಲೆ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಚಾರಣೆ ನಡೆಸಿದ ಬಳಿಕ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ತನಿಖೆ ವೇಳೆ ತಾನೇ ಕೊಲೆ ಮಾಡಿರುವುದಾಗಿ ಆರೋಪಿ ಚಂದ್ರಪ್ಪ ಒಪ್ಪಿಕೊಂಡಿದ್ದಾನೆ ಎಂದು ಚಿತ್ರದುರ್ಗ ಎಸ್ಪಿ ಜಿ.ರಾಧಿಕಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Last Updated : Jul 30, 2020, 3:18 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.