ಚಿತ್ರದುರ್ಗ: ಕೋಟೆನಾಡಿನ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಕಾಳಜಿ ವಹಿಸಿ ಹಣ ಬಿಡುಗಡೆ ಮಾಡದಿದ್ದರೆ ಜಿಲ್ಲೆಯ ಯಾವುದೇ ಶಾಸಕರು ಮುಂದಿನ ಸದನದಲ್ಲಿ ಭಾಗವಹಿಸುವುದಿಲ್ಲ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ತಿಪ್ಪಾರೆಡ್ಡಿ, 2013 ರಲ್ಲಿ ಜಿಲ್ಲೆಗೆ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿ, ಜಾಗ ನಿಗದಿಪಡಿಸಿದ್ದಾರೆ. ಆದರೆ, ಇದುವರೆಗೂ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸರ್ಕಾರ ಒಲವು ತೋರದಿದ್ದರೆ ಜಿಲ್ಲೆಯ ಎಲ್ಲ ಶಾಸಕರು ಸದನಕ್ಕೆ ಗೈರಾಗುವುದಾಗಿ ಶಾಸಕ ತಿಪ್ಪಾರೆಡ್ಡಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲುಗೆ ಹೇಳಿದರು.