ಚಿತ್ರದುರ್ಗ: ತಾಲೂಕಿನ ಪರಶುರಾಂಪುರ ಗ್ರಾಮದ ಬಳಿಯ ವೇದಾವತಿ ನದಿಯ ಬ್ಯಾರೇಜ್ ಬಳಿ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ಶ್ರೀರಾಮುಲು ಶಿಷ್ಟಾಚಾರ ಪಾಲಿಸಿಲ್ಲ ಎಂದು ಶಾಸಕ ರಘುಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮಕ್ಕೆ ಬನ್ನಿ ಎಂದು ಜಿಲ್ಲಾಧಿಕಾರಿ ಕಛೇರಿಯಿಂದ ನನಗೆ ಯಾವುದೇ ಕರೆ ಬಂದಿಲ್ಲ, ಅಲ್ಲದೇ ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಕುಮಾರ್ ಹಾಗು ವಿಧಾನ ಪರಿಷತ್ ಸದಸ್ಯರಾದ ಜಯಮ್ಮ ಬಾಲರಾಜ್ರಿಗೂ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕಾರ್ಯಕ್ರಮ ನಡೆದ ದಿನದಂದು ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ರೂ, ಇದ್ಯಾವುದನ್ನೂ ಲೆಕ್ಕಿಸದೇ ಆರೋಗ್ಯ ಸಚಿವ ಶ್ರೀ ರಾಮುಲು ಸೇಬಿನ ಹಾರ ಹಾಕಿಸಿಕೊಂಡು, ಹೂ ಮಳೆಗರೆಸಿಕೊಂಡು ಜನರಿಂದ ಅದ್ದೂರಿ ಸ್ವಾಗತ ಮಾಡಿಸಿಕೊಂಡಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರೇ ಹೀಗೆ ಮಾಡಿರುವುದು ಖಂಡನೀಯ ಎಂದರು.