ಚಿತ್ರದುರ್ಗ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ವಿಚಾರವಾಗಿ ಸಿಎಂ ಬಿಎಸ್‌ವೈ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಕೇಂದ್ರ ವರಿಷ್ಠರು ಕೂಡಲೇ ಸಿಎಂ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಸುವಂತೆ ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಜಯ ಬಸವ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.
ಹಿರಿಯೂರು ತಾಲೂಕಿನ ಆದಿವಾಲಾ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಸಿಎಂ ಮಾತು ತಪ್ಪುತ್ತಿದ್ದಾರೆ. ಅವರ ಮೇಲೆ ಅನುಮಾನ ವ್ಯಕ್ತವಾಗುತ್ತಿದೆ. ಬಿಎಸ್‌ವೈ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವರನ್ನು ಸಿಎಂ ಸ್ಥಾನದಿಂದ ಕೆಳಗಿಸಿ ಬೇರೊಬ್ಬ ಲಿಂಗಾಯತ ನಾಯಕನನ್ನು ಸಿಎಂ ಹುದ್ದೆಯಲ್ಲಿ ತರಬೇಕು ಎಂದು ಒತ್ತಾಯಿಸಿದರು.
ಯಡಿಯೂರಪ್ಪ ವಯೋಸಹಜ ಕಾಯಿಲೆ ಬಳಲುತ್ತಿದ್ದಾರೆ. ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ದಿನಕ್ಕೆ ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಮಾತು ಬದಲಿಸುತ್ತಿದ್ದಾರೆ ಎಂದು ಸಿಎಂ ವಿರುದ್ಧ ಜಯ ಮೃತ್ಯುಂಜಯ ಸ್ವಾಮೀಜಿ ಕೆಂಡಕಾರಿದರು.
ಇದನ್ನು ಓದಿ: ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ: ಪರಸ್ಪರ ಸವಾಲೆಸೆದ ಸಿಎಂ ಬಿಎಸ್‌ವೈ- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ!
ಸಮುದಾಯದ ವಿರುದ್ಧ ಕೇಂದ್ರವನ್ನ ಎತ್ತಿಕಟ್ಟುವ ಪ್ರಯತ್ನ ಮಾಡಲಾಗುತ್ತಿದೆ. ರಾಜ್ಯಕ್ಕೆ ಕೇಂದ್ರ ನಾಯಕ ಅಮಿತ್ ಶಾ, ನಡ್ಡಾ ಸಿಎಂ ಅಲ್ಲ. ರಾಜ್ಯದ ಸಿಎಂ ಯಡಿಯೂರಪ್ಪ ಅವರಿದ್ದಾರೆ. ಪಂಚಮಸಾಲಿಗೆ ಕೂಡಲೇ ಮೀಸಲಾತಿ ನೀಡಲಿ, ಇಲ್ಲವಾದ್ರೆ ಹೋರಾಟ ಉಗ್ರ ರೂಪ ತಾಳಲಿದೆ. ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಆಕ್ರೋಶ ಬರಿತರಾಗಿ ಮಾತನಾಡಿದರು.