ETV Bharat / state

ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಭಾಪತಿ..! - ಹುಬ್ಬಳ್ಳಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿನಿಂದ ತೆರಳುತ್ತಿದ್ದರು

ಸಭಾಪತಿ ಬಸವರಾಜ ಹೊರಟ್ಟಿ ಕಚೇರಿ ಕಾರ್ಯ ಕಲಾಪ ಮುಗಿಸಿ ಹುಬ್ಬಳ್ಳಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿನಿಂದ ತೆರಳುತ್ತಿದ್ದರು. ಈ ವೇಳೆ, ಮಾರ್ಗ ಮಧ್ಯೆ ಸಂಭವಿಸಿದ್ದ ಅಪಘಾತ ಗಮನಿಸಿ ಕೂಡಲೇ ತಮ್ಮ ವಾಹನದಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ದೊರಕಿಸಲು ಸಭಾಪತಿ ಸಹಕರಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಭಾಪತಿ..!

author img

By

Published : Jun 26, 2021, 8:10 PM IST

ಚಿತ್ರದುರ್ಗ: ಕಾರು ಹಾಗೂ ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬಾಲಕ ಹಾಗೂ ದಂಪತಿಯನ್ನು ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾನವೀಯತೆ ಮೆರೆದಿದ್ದಾರೆ. ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿತ್ತು.

ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಭಾಪತಿ..!

ಸಭಾಪತಿ ಬಸವರಾಜ ಹೊರಟ್ಟಿ ಕಚೇರಿ ಕಾರ್ಯ ಕಲಾಪ ಮುಗಿಸಿ ಹುಬ್ಬಳ್ಳಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿನಿಂದ ತೆರಳುತ್ತಿದ್ದರು. ಈ ವೇಳೆ, ಮಾರ್ಗ ಮಧ್ಯೆ ಸಂಭವಿಸಿದ್ದ ಅಪಘಾತ ಗಮನಿಸಿ ಕೂಡಲೇ ತಮ್ಮ ವಾಹನದಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ದೊರಕಿಸಲು ಸಭಾಪತಿ ಸಹಕರಿಸಿದ್ದಾರೆ. ಅಲ್ಲದೇ, ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಸ್ಥಳಕ್ಕೆ ಆಗಮಿಸುವಂತೆ ಸೂಚಿಸಿದರು. ಸುಮಾರು ಅರ್ಧ ಗಂಟೆಗಿಂತಲೂ ಹೆಚ್ಚು ಕಾಲ ಅಪಘಾತ ಸ್ಥಳದಲ್ಲಿಯೇ ಇದ್ದು ಗಾಯಾಳುಗಳಿಗೆ ಧೈರ್ಯ ಹೇಳಿ ಅವರಿಗೆ ತುರ್ತು ಚಿಕಿತ್ಸೆ ದೊರಕಿಸಿದರು.

ಸಭಾಪತಿ ಬಸವರಾಜ ಹೊರಟ್ಟಿ ಅವರು ಸಾಂವಿಧಾನಿಕವಾಗಿ ದೊಡ್ಡ ಹುದ್ದೆಯಲ್ಲಿದ್ದರೂ ಜನ ಸಾಮಾನ್ಯರ ಕಷ್ಟಗಳಿಗೆ ಕೂಡಲೇ ಪ್ರತಿಸ್ಪಂದಿಸಿ ನೆರವಾಗುವ ಮಾನವೀಯ ಗುಣ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದ್ದು, ಇಂದಿನ ಯುವ ಜನತೆಗೆ ಮಾದರಿಯಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.