ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು ಕೆಎಸ್ಆರ್ಪಿ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.
ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕೆಎಸ್ಆರ್ಪಿ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (27) ಪಿ-2831ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನ ಅತ್ತಿಬೆಲೆ ಚೆಕ್ ಪೋಸ್ಟ್ನಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಕಾರ್ಯನಿರ್ವಹಿಸಿದ್ದರಿಂದ ಸೋಂಕು ತಗುಲಿದೆ ಎಂದು ಶಂಕಿಸಲಾಗಿದೆ. ಮೇ 24 ರಂದು ಚಿತ್ರದುರ್ಗಕ್ಕೆ ಆಗಮಿಸಿದ್ದ ಇವರನ್ನು ಸೊಂಡೇಕೊಳ ಗ್ರಾಮದ ಬಳಿಯ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಸ್ವಾಬ್ ಟೆಸ್ಟ್ ಗಾಗಿ ಕಳುಹಿಸಲಾಗಿತ್ತು.
ಇದೀಗ ಪರೀಕ್ಷಾ ವರದಿ ಬಂದಿದ್ದು, ಕೊರೊನಾ ಇರುವುದು ಖಚಿತವಾಗಿದೆ. ಹಾಗಾಗಿ ಸೋಂಕಿತ ವ್ಯಕ್ತಿಯನ್ನು ಚಿತ್ರದುರ್ಗ ನಗರದಲ್ಲಿರುವ ಕೋವಿಡ್-19 ಆಸ್ಪತ್ರೆಗೆ ರವಾನಿಸಲಾಗಿದೆ.