ETV Bharat / state

ದನದ ಕೊಟ್ಟಿಗೆಗಿಂತ ಕನಿಷ್ಟ ಗಡಿ ಗ್ರಾಮದ ಈ ಸರ್ಕಾರಿ ಶಾಲೆ.. ಈ ಸ್ಥಿತಿಯಲ್ಲಿರಲು ವಿದ್ಯಾರ್ಥಿಗಳು ಮಾಡಿದ ತಪ್ಪೇನು!? - ಚಳ್ಳಕೆರೆ ತಾಲೂಕಿನ ಗಡಿಗ್ರಾಮ ಓಬಳಾಪುರ ಗ್ರಾಮದ ಸರ್ಕಾರಿ ಶಾಲೆ

ಚಳ್ಳಕೆರೆ ನಗರದಿಂದ 42 ಕಿ. ಮೀ. ದೂರದಲ್ಲಿರುವ ಹಾಗೂ ಆಂಧ್ರಪ್ರದೇಶದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಈ ಓಬಳಾಪುರ ಗ್ರಾಮದಲ್ಲಿ 1 ರಿಂದ 8ನೇ ತರಗತಿಯ 270 ವಿದ್ಯಾರ್ಥಿಗಳಿದ್ದಾರೆ. ಆದರೆ, ಸರಿಯಾದ ಬೋಧನಾ ಕೊಠಡಿಗಳು ಇಲ್ಲದೇ ಮಕ್ಕಳು ಮರದ ಕೆಳಗೆ ಕುಳಿತು ಪಾಠ ಕೇಳುತ್ತಿದ್ದಾರೆ..

lack infrastructure in Govt school
ಮರದ ನೆರಳಲ್ಲಿ ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು
author img

By

Published : Oct 27, 2021, 4:24 PM IST

ಚಿತ್ರದುರ್ಗ : ಶತಮಾನ ಪುರೈಸಿದ ಚಳ್ಳಕೆರೆ ತಾಲೂಕಿನ ಗಡಿಗ್ರಾಮ ಓಬಳಾಪುರ ಗ್ರಾಮದ ಸರ್ಕಾರಿ ಶಾಲೆ ಮೂಲಸೌಲಭ್ಯದ ಕೊರತೆಯಿಂದ ಬಳಲುತ್ತಿದೆ. ಹೀಗಾಗಿ, ನೂರಾರು ಕನಸು ಕಟ್ಟಿಕೊಂಡು ಭವಿಷ್ಯ ರೂಪಿಸಿಕೊಳ್ಳುವ ವಿದ್ಯಾರ್ಥಿಗಳು ಮರದ ನೆರಳಲ್ಲಿ ಕುಳಿತು ಪಾಠ ಕೇಳುತ್ತಿದ್ದಾರೆ.

ಚಳ್ಳಕೆರೆ ತಾಲೂಕಿನ ಗಡಿಗ್ರಾಮ ಓಬಳಾಪುರದ ಸರ್ಕಾರಿ ಶಾಲೆ..

ಕೋವಿಡ್ ಹಿನ್ನೆಲೆ 18 ತಿಂಗಳ ನಂತರ ಸರ್ಕಾರ 1 ರಿಂದ 5ನೇ ತರಗತಿ ಮಕ್ಕಳಿಗೆ ಶಾಲೆಗಳನ್ನು ಸೋಮವಾರದಿಂದ ಆರಂಭಿಸಿದೆ. ವಿದ್ಯಾರ್ಥಿಗಳು ಸಹ ಉತ್ಸಾಹದಿಂದ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ.

ಆದರೆ, ಓಬಳಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಥಿಲಗೊಂಡ ಶಾಲಾ ಕೊಠಡಿಗಳನ್ನು ದುರಸ್ಥಿ ಮಾಡದೇ ಹಾಗೆಯೇ ಬಿಡಲಾಗಿದೆ. ಹೀಗಾಗಿ, ಮಕ್ಕಳು ಶಾಲಾ ಕೊಠಡಿಯಲ್ಲಿ ಕುಳಿತು ಪಾಠ ಕೇಳುವುದು ಅಪಾಯಕ್ಕೆ ಆಹ್ವಾನ ನೀಡಿದಂತೆ.

lack infrastructure in Govt school
ಚಳ್ಳಕೆರೆ ತಾಲೂಕಿನ ಗಡಿಗ್ರಾಮ ಓಬಳಾಪುರದ ಸರ್ಕಾರಿ ಶಾಲೆ

ಚಳ್ಳಕೆರೆ ನಗರದಿಂದ 42 ಕಿ. ಮೀ. ದೂರದಲ್ಲಿರುವ ಹಾಗೂ ಆಂಧ್ರಪ್ರದೇಶದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಈ ಓಬಳಾಪುರ ಗ್ರಾಮದಲ್ಲಿ 1 ರಿಂದ 8ನೇ ತರಗತಿಯ 270 ವಿದ್ಯಾರ್ಥಿಗಳಿದ್ದಾರೆ. ಆದರೆ, ಸರಿಯಾದ ಬೋಧನಾ ಕೊಠಡಿಗಳು ಇಲ್ಲದೇ ಮಕ್ಕಳು ಮರದ ಕೆಳಗೆ ಕುಳಿತು ಪಾಠ ಕೇಳುತ್ತಿದ್ದಾರೆ.

lack infrastructure in Govt school
ಮರದ ನೆರಳಲ್ಲಿ ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು

ಕೊಠಡಿಯ ಮೇಲ್ಛಾವಣಿಯ ಹೆಂಚುಗಳು ಹಾರಿ ಹೋಗಿವೆ. ಗೋಡೆಗಳು ಕುಸಿದಿವೆ. ಕುಳಿತುಕೊಳ್ಳಲು ಸರಿಯಾದ ಬೆಂಚ್‌ಗಳಿಲ್ಲ. ಶಾಲೆಯಲ್ಲಿ ಶೌಚಾಲಯದ ವ್ಯವಸ್ಥೆಯೂ ಇಲ್ಲ. ಮಕ್ಕಳು ಬಯಲಲ್ಲಿ ಶೌಚಕ್ಕೆ ಹೋಗುತ್ತಾರೆ. ಶಾಲಾ ಕಾಂಪೌಂಡ್ ಇಲ್ಲ. ಜತೆಗೆ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರು ಸಹ ಇಲ್ಲದಿರುವುದು ದುರಂತ.

ಜಿಲ್ಲಾಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಶಾಲಾ ಆಡಳಿತ ಹಾಗೂ ಗ್ರಾಮಸ್ಥರು ಈ ಕುರಿತು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಶಾಲಾ ದುರಸ್ಥಿ ಬಗ್ಗೆ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯಕ್ಕೆ ಬಂದಾಗ ಗಮನಕ್ಕೆ ತಂದು ಮನವಿ ಮಾಡಲಾಗಿತ್ತು.

ಜಿಲ್ಲಾ ಸಾರ್ವಜನಿಕ ಶಿಕ್ಷಣ ಉಪನಿರ್ದೇಶಕರಾದ ರವಿಶಂಕರ್ ರೆಡ್ಡಿ ಹಾಗೂ ಚಳ್ಳಕೆರೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೂಡ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದರು. ಹೊಸ ಕೊಠಡಿಗಳ ಬಗ್ಗೆ ಭರವಸೆ ನೀಡಿದ್ದರು. ಆದರೆ, ಈವರೆಗೂ ಭರವಸೆ ಭರವಸೆಯಾಗಿಯೇ ಉಳಿದಿದೆ ಎನ್ನುತ್ತಾರೆ ಗ್ರಾಮಸ್ಥರು.

ಇದನ್ನೂ ಓದಿ: ಬಹಿಷ್ಕಾರ ಪ್ರಕರಣ : ಮಾಧ್ಯಮಗಳ ಮುಂದೆ ಹೋಗಿದ್ದಕ್ಕೆ ಕುಟುಂಬದವರ ಮೇಲೆ ಹಲ್ಲೆ ನಡೆಸಿದ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.