ಚಿತ್ರದುರ್ಗ : ನಗರದಲ್ಲಿ ಇತಿಹಾಸ ಪ್ರಸಿದ್ಧ ಕೋಟೆ ಹಾಗೂ ಬೆಟ್ಟಗಳಿವೆ. ಅವುಗಳನ್ನು ನೋಡಲು ವರ್ಷಪೂರ್ತಿ ಸಾವಿರಾರು ಪ್ರವಾಸಿಗರು ನಗರಕ್ಕೆ ಭೇಟಿ ನೀಡುತ್ತಾರೆ. ಆದರೆ, ನಗರದ ರಸ್ತೆಗಳಲ್ಲಿ ಸಾರ್ವಜನಿಕರು ಓಡಾಡುವಂತಿಲ್ಲ.
ಕೋಟೆನಾಡು ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಮಾರ್ಗವಾಗಿ ಪ್ರವಾಸಿ ಮಂದಿರದವರಿಗೂ ಸುಮಾರು 25 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ. ಕಳೆದ ತಿಂಗಳ ಹಿಂದೆಯೇ ರಸ್ತೆ ಕಾಮಗಾರಿ ನಗರ ಸಭೆ ಆರಂಭಿಸಿದೆ. ನಿಗದಿತ ಅವಧಿಯಲ್ಲಿ ರಸ್ತೆ ಕಾಮಗಾರಿಗಳು ಪೂರ್ಣಗೊಳ್ಳದೆ ಇರುವುದು ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದೆ.
ಇತ್ತ ವಾಹನ ಸವಾರರು ಸ್ವಲ್ಪ ಯಾಮಾರಿದ್ರೂ ರಸ್ತೆ ಕಾಮಗಾರಿ ಸ್ಥಳದಲ್ಲಿ ಬಿದ್ದು ಪ್ರಾಣ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ಅಧಿಕಾರಿಗಳು ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದು, ನಗರ ನಿವಾಸಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಸಂಜೆಯಾದ್ರೆ ಸಾಕು ದುರ್ಗಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಹಾಗೂ ನಗರವಾಸಿಗಳಿಗೆ ಪ್ರಾಣಾಪಾಯದ ಆತಂಕ ಶುರುವಾಗಿದೆ.
ಕಾಮಗಾರಿ ಸ್ಥಳದಲ್ಲಿ ರಸ್ತೆ ಸುರಕ್ಷತಾ ಕ್ರಮದ ಕೊರತೆ : ಈಗಾಗಲೇ ನಗರದ ಬಹುತೇಕ ಮುಖ್ಯರಸ್ತೆಗಳಲ್ಲಿ ಸಿಸಿ ರಸ್ತೆ ಕಾಮಗಾರಿ ನಡೆದಿದೆ. ಹಳೆ ರಸ್ತೆಗಳನ್ನ ತೆರವುಗೊಳಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಇನ್ನು, ಪ್ರವಾಸಿ ಮಂದಿರ ರಸ್ತೆ, ಜಿಲ್ಲಾಸ್ಪತ್ರೆ ಮುಂಭಾಗದ ರಸ್ತೆ, ಅಂಬೇಡ್ಕರ್ ವೃತ್ತ ಹಾಗೂ ಬಸ್ ನಿಲ್ದಾಣ ರಸ್ತೆಗಳಲ್ಲಿ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ.
ಇತ್ತ ನಿತ್ಯವೂ ಒಂದೇ ರಸ್ತೆಯಲ್ಲಿ ದ್ವಿಮುಖ ಸಂಚಾರಕ್ಕೆ ಅಧಿಕಾರಿಗಳು ಅವಕಾಶ ಕಲ್ಪಿಸಿದ್ದಾರೆ. ಕಾಮಗಾರಿ ಹಂತದಲ್ಲಿರುವ ಸ್ಥಳಗಳಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ನಗರಸಭೆ ಹಾಗೂ ಜಿಲ್ಲಾಡಳಿತ ಕೈಕೊಗಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕಾಮಗಾರಿ ಸ್ಥಳದಲ್ಲಿಯೇ ರಾತ್ರಿ ಸಮಯದಲ್ಲಿ ರಸ್ತೆ ಕಾಮಗಾರಿಗಳಿಗೆ ಬಳಸುವ ವಾಹನಗಳ ಪಾರ್ಕ್ ಮಾಡಲಾಗುತ್ತಿದೆ. ಕಾಮಗಾರಿ ಸ್ಥಳದಲ್ಲೇ ಮೊನ್ನೆ ತಡರಾತ್ರಿ ನಿಂತ ಜೆಸಿಬಿಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪಿದ್ದರು. ಇದು ನಗರ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಪರ್ಯಾಯ ಮಾರ್ಗ ಕಲ್ಪಿಸುವಂತೆ ಸಾರ್ವಜನಿಕರ ಒತ್ತಾಯ: ನಗರದ ಪ್ರಮುಖ ಸ್ಥಳಗಳಲ್ಲಿ ಈಗಾಗಲೇ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ. ವಾಹನ ಚಾಲನೆ ಮಾಡುವವಾಗ ಅನೇಕ ವಾಹನ ಸವಾರರು ಅಪಘಾತಗೊಂಡ ಗಾಯಗೊಳ್ಳುತ್ತಿದ್ದಾರೆ ಎಂದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಸಿಡಿಮಿಡಿಗೊಳ್ಳುವಂತಾಗಿದೆ. ರಸ್ತೆ ಪೂರ್ಣಗೊಳ್ಳುವವರೆಗೂ ಪರ್ಯಾಯ ಮಾರ್ಗವನ್ನ ಕಲ್ಪಿಸುವಂತೆ ನಗರ ನಿವಾಸಿಗಳು ಜಿಲ್ಲಾಡಾಳಿತವನ್ನ ಒತ್ತಾಯಿಸುತ್ತಿದ್ದಾರೆ.
ಓದಿ : ಬೆಳಗಾವಿ : ಅಲುಗಾಡದೇ, ಅಂಜದೇ ಧ್ವಜಸ್ತಂಭ ಕಾದು ಕುಳಿತ ಕನ್ನಡಪರ ಹೋರಾಟಗಾರರು..
ಈ ಕುರಿತು ನಗರಸಭೆ ಅಧಿಕಾರಿಗಳನ್ನು ಪ್ರಶ್ನಿಸಿದ್ರೆ, ರಸ್ತೆ ಕಾಮಗಾರಿಗಳನ್ನು ಪಿಡಬ್ಲ್ಯೂಡಿ ಇಲಾಖೆಗೆ ವಹಿಸಲಾಗಿದೆ. ನಾವು ಕೂಡ ರಸ್ತೆ ಸುರಕ್ಷತಾ ಕ್ರಮಗಳ ಪಾಲನೆಯೊಂದಿಗೆ ಕಾಮಗಾರಿ ನಡೆಸುವಂತೆ ಹೇಳಿದ್ದೇವೆ. ಗುತ್ತಿಗೆದಾರರು ಸರಿಯಾಗಿ ಕ್ರಮಕೈಗೊಂಡಿಲ್ಲ. ಇನ್ಮುಂದೆ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ರಸ್ತೆ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಭರವಸೆಯ ಮಾತುಗಳನ್ನ ಆಡುತ್ತಿದ್ದಾರೆ.