ಚಿತ್ರದುರ್ಗ: ನಗರದ ಒನಕೆ ಓಬವ್ವ ವೃತ್ತದಲ್ಲಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದರು.
ಇನ್ನು ವೇತನ ತಾರತಮ್ಯ ಮಾಡುತ್ತಿರುವ ಸರ್ಕಾರದ ವಿರುದ್ಧ ಈ ಹಿಂದೆ ಪ್ರತಿಭಟನೆ ಮಾಡಿದ್ದಾಗ ಆಶ್ವಾಸನೆಯನ್ನಷ್ಟೇ ನೀಡಿದ್ದರು. ಅದನ್ನು ಇನ್ನು ಪೂರ್ಣಗೊಳಿಸಿಲ್ಲ. ತಕ್ಷಣ ಆಶ್ವಾಸನೆ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿದರು.
ಈ ಬಗ್ಗೆ ಸಾಕಷ್ಟು ಬಾರಿ ಪ್ರತಿಭಟನೆ ನಡೆಸಿ, ಸರ್ಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನೆ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.