ಚಿತ್ರದುರ್ಗ: ಲಾಕ್ಡೌನ್ನಿಂದಾಗಿ ತೊಂದರೆ ಅನುಭವಿಸುತ್ತಿರುವ ರೈತರ ಪರ ಅಧಿಕಾರಿಗಳು ನಿಲ್ಲಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ಜಿ.ಪಂ ಸಭಾಂಗಣದಲ್ಲಿ ನಡೆಸಿದ ಸಭೆ ಬಳಿಕ ಮಾತನಾಡಿದ ಅವರು, ಕಳಪೆ ಬೀಜ ನೀಡುವುದರಿಂದ ರೈತರ ಕೊಲೆ ಮಾಡಿದಂತಾಗುತ್ತದೆ. ಕಳಪೆ ಬೀಜ ನೀಡಿದರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ. ಅಧಿಕಾರಿಗಳು ಆಗಾಗ್ಗೆ ಅಂಗಡಿಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಬೇಕು ಎಂದು ಸೂಚಿಸಿದರು.
ಇನ್ನೂ ಕೊರೊನಾ ಪರಿಣಾಮ ಹೂ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೂ ಬೆಳೆಗಾರರ ಬಗ್ಗೆ ಸಿಎಂ ವರದಿಗೆ ಸೂಚಿಸಿದ್ದು,ಶೀಘ್ರ ಪರಿಹಾರ ಕ್ರಮಕ್ಕೆ ಮುಂದಾಗಲಿದ್ದೇವೆ ಎಂದರು.