ಚಿತ್ರದುರ್ಗ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಡು ಚಿರತೆಯೊಂದು ಮೃತಪಟ್ಟಿರುವ ಘಟನೆ ಹಿರಿಯೂರು ತಾಲೂಕಿನ ಉಡುವಳ್ಳಿ ಬಳಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ಚಿರತೆಗೆ ಸುಮಾರು ಒಂದು ವರ್ಷವಾಗಿರಬಹುದು ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚಿರತೆ ಶವ ನೋಡಿದ ಜನರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಇಂದು ಬೆಳಗಿನ ಜಾವವೇ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಓದಿ: ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಹೆಚ್ಚು ಬಸ್ಗಳ ಮೇಲೆ ಕಲ್ಲು ತೂರಾಟ ಆರೋಪ
ಘಟನಾ ಸ್ಥಳಕ್ಕೆ ಹಿರಿಯೂರು ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದಿಂದ ಚಿರತೆ ಮುಖದ ಭಾಗಕ್ಕೆ ತೀವ್ರವಾಗಿ ಗಾಯವಾಗಿರುವ ಪರಿಣಾಮ ಸಾವನ್ನಪ್ಪಿದೆ ಎಂದು ಹಿರಿಯೂರು ಆರ್‌ಎಫ್‌ಓ ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.