ಚಿತ್ರದುರ್ಗ: ಲಾಕ್‌ಡೌನ್ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೀಡಾಗಿದ್ದು, ಬೆಳೆದ ಬೆಳೆಯನ್ನ ಮಾರುಕಟ್ಟೆಗೆ ಕೊಂಡೊಯ್ಯಲಾಗದೆ ಕಂಗಾಲಾಗಿದ್ದಾರೆ.
ಚಿತ್ರದುರ್ಗದಲ್ಲಿ ಬೂದು ಕುಂಬಳಕಾಯಿ ಬೆಳೆದ ಓರ್ವ ರೈತ ಸಂಕಷ್ಟದಲ್ಲಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕ್ಯಾದಿಗುಂಟೆ ಗ್ರಾಮದ ರೈತ ಧನಂಜಯ ತನ್ನ 4 ಎಕರೆ ಜಮೀನಿನಲ್ಲಿ ಕುಂಬಳಕಾಯಿ ಬೆಳೆದಿದ್ದ. ಲಾಕ್‌ಡೌನ್ ಘೋಷಣೆಯಾದ ಬಳಿಕ ಮಾರುಕಟ್ಟೆಗೆ ಕೊಂಡೊಯ್ಯಲಾಗದೆ 50 ಟನ್ ಕುಂಬಳಕಾಯಿ ಜಮೀನಿನಲ್ಲೇ ಕೊಳೆಯುತ್ತಿದೆ.
ಕುಂಬಳಕಾಯಿಯಿಂದ ಸುಮಾರು 6 ಲಕ್ಷ ನಷ್ಟ ಉಂಟಾಗಿ ಕಂಗಾಲಾಗಿರೋ ರೈತ ಧನಂಜಯ್, ತೋಟಗಾರಿಕೆ ಇಲಾಖೆಗೆ ತಿಳಿಸಿದರೂ ಅಧಿಕಾರಿಗಳು ಸ್ಥಳಕ್ಕೆ ಧಾವಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ.