ETV Bharat / state

ಕೊರೊನಾ ತಡೆಗಟ್ಟುವ ಪೊಲೀಸರ ಕಾರ್ಯವೈಖರಿಗೆ ಪ್ರಶಂಸೆ: ಮಾದಾರ ಚನ್ನಯ್ಯ ಶ್ರೀ

ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ಹಾವಳಿಯನ್ನು ತಡೆಗಟ್ಟಿದ ಪೊಲೀಸ್​ ಇಲಾಖೆಯನ್ನು ಶ್ರೀಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿಗಳು ಪ್ರಶಂಶಿಸಿದರು.

ಕೊರೊನಾ ತಡೆಗಟ್ಟುವ ಪೊಲೀಸರ ಕಾರ್ಯವೈಖರಿಗೆ ಪ್ರಶಂಸೆ

author img

By

Published : Jun 30, 2020, 6:58 PM IST

ಚಿತ್ರದುರ್ಗ: ಕೊರೊನಾ ಸೋಂಕು ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ಹರಡದಂತೆ ಕಾರ್ಯನಿರ್ವಹಿಸಿದ ಪೊಲೀಸರನ್ನು ಶ್ರೀಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿಗಳು ಪ್ರಶಂಶಿಸಿದರು.

ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ರಾಧಿಕಾ. ಜಿರವರಿಗೆ ಶಾಲು ಹೊದಿಸಿ ಸನ್ಮಾನ ಮಾಡುವ ಮೂಲಕ ಪೊಲೀಸ್​ ಇಲಾಖೆಗೆ ಅಭಿನಂದನೆ ಸಲ್ಲಿಸಿದರು. ಬಳಿಕ ಪ್ರತಿಕ್ರಿಯಿಸಿದ ಸ್ವಾಮೀಜಿಗಳು, ಸೋಂಕು ತಡೆಗಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಅವರು ನಿಜವಾದ ಕೊರೊನಾ ಯೋಧರಂತೆ ಕೆಲಸ ಮಾಡಿದ್ದಾರೆ ಎಂದರು.

ಸೋಂಕಿತ ಪ್ರದೇಶಗಳಿಂದ ಜನರು ಜಿಲ್ಲೆಗೆ ಬರದಂತೆ ಎಚ್ಚರಿಕೆ ವಹಿಸಿದ್ದಾರೆ. ಟ್ಯಾಂಕರ್​​ನಲ್ಲಿ ಪ್ರಯಾಣಿಸುತ್ತಿದ್ದ ಸೋಂಕಿತರ ಒಂದು ದೊಡ್ಡ ಗುಂಪನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಿ, ಚಿಕಿತ್ಸೆ ನೀಡಿ ಬಳಿಕ ಉತ್ತರ ಪ್ರದೇಶದ ಅವರ ಊರುಗಳಿಗೆ ಕಳುಹಿಸಿದ್ದಾರೆ. ಇವೆಲ್ಲವೂ ಇಲಾಖೆಯ ಮಾನವೀಯತೆಗೆ ನಿದರ್ಶನವಾಗಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.