ಚಿತ್ರದುರ್ಗ: ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ವೀರ ದಿಮ್ಮನಹಳ್ಳಿಯಲ್ಲಿ ನಡೆದಿದೆ.
ವೀರದಿಮ್ಮನಹಳ್ಳಿ ಗ್ರಾಮದ ತಾವರೆ ನಾಯಕ (58) ಮೃತ ಕೂಲಿ ಕಾರ್ಮಿಕ ಎಂದು ತಿಳಿದು ಬಂದಿದೆ. ನಿರ್ಮಾಣ ಹಂತದ ಕಟ್ಟಡಕ್ಕೆ ನೀರು ಹಾಯಿಸುತ್ತಿದ್ದ ವೇಳೆ, ಈ ಅವಘಡ ಸಂಭವಿಸಿದೆ. ಈ ನಡುವೆ ಗಾಯಾಳು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಸುನೀಗಿದ್ದಾನೆ ಎನ್ನಲಾಗುತ್ತಿದೆ. ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.