ಚಿತ್ರದುರ್ಗ: ಸಲೂನ್ನಲ್ಲಿಕೆಲಸ ಮಾಡುತ್ತಿದ್ದ ವ್ಯಕ್ತಿವೋರ್ವ ಶವವಾಗಿ ಪತ್ತೆಯಾಗಿದ್ದು, ಹಲ್ಲೆ ಮಾಡಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ನಗರದ ಹಳೇ ಬೆಂಗಳೂರು ರಸ್ತೆಯ ಕೂಗಳತೆಯ ದೂರದಲ್ಲಿ ಕಸದ ರಾಶಿಯಲ್ಲಿ ನವೀನ್(35) ಶವ ಪತ್ತೆಯಾಗಿದ್ದು, ಹತ್ಯೆ ಮಾಡಿ ಸಾಯಿಸಿರುವ ಅನುಮಾನ ಮೂಡಿದೆ. ನವೀನ್ ಅಲಿಯಾಸ್ ಜಂಗ್ಲಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾನೆ. ಹೇರ್ ಕಟಿಂಗ್ ಸಲೂನ್ನಲ್ಲಿ ಕೆಲಸ ಮಾಡುತ್ತಿದ್ದ ನವೀನ್ನನ್ನು ಯಾರೋ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಕಸದ ರಾಶಿಗೆ ಹಾಕಿರುವ ಶಂಕೆ ವ್ಯಕ್ತವಾಗಿದೆ.
ಚಿತ್ರದುರ್ಗದ ಹಳೇ ಬೆಂಗಳೂರು ರಸ್ತೆಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬಡಾವಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.