ETV Bharat / state

ಭೋವಿ ಸಮಾಜಕ್ಕೆ ಸಿಗದ ಬಿಜೆಪಿ ಟಿಕೆಟ್ : ಸಿದ್ದರಾಮೇಶ್ವರ ಶ್ರೀ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ - undefined

ಭೋವಿ ಸಮುದಾಯಕ್ಕೆ ಬಿಜೆಪಿಯಿಂದ ಟಿಕೆಟ್ ನೀಡದಿರುವುದಕ್ಕೆ ಚಿತ್ರದುರ್ಗದಲ್ಲಿ ಭೋವಿ ಗುರು ಪೀಠದ ಪೀಠಾಧಿಪತಿ ಶ್ರೀ ಸಿದ್ದರಾಮೇಶ್ವರ ಶ್ರೀ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಸಿದ್ದರಾಮೇಶ್ವರ ಶ್ರೀ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
author img

By

Published : Mar 23, 2019, 10:14 PM IST

ಚಿತ್ರದುರ್ಗ: ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ನೀಡದಿರುವುದು ಭೋವಿ ಗುರು ಪೀಠದ ಪೀಠಾಧಿಪತಿ ಶ್ರೀ ಸಿದ್ದರಾಮೇಶ್ವರ ಶ್ರೀ ಆಕ್ರೋಶಕ್ಕೆ ಕಾರಣವಾಗಿದೆ. ಟಿಕೆಟ್ ನೀಡುವುದಾಗಿ ಮಾತು ನೀಡಿದ್ದ ಮಾಜಿ ಸಿಎಂ ಯಡಿಯೂರಪ್ಪ ಮಾತಿಗೆ ತಪ್ಪಿದ್ದನ್ನು ಖಂಡಿಸಿ, ಭೋವಿ ಸಮುದಾಯದವರು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡು, ಟಿಕೆಟ್ ನೀಡುವಂತೆ ಬಿಎಸ್​ವೈಯನ್ನು ಒತ್ತಾಯಿಸಿದರು. ನಗರದ ಗಾಂಧಿ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ಪ್ರವಾಸಿ ಮಂದಿರದಿಂದ ಡಿಸಿ ವೃತ್ತಕ್ಕೆ ತಲುಪಿ, ಮಾನವ ಸರಪಳಿ ನಿರ್ಮಾಣ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮೇಶ್ವರ ಶ್ರೀ ನೇತೃತ್ವದಲ್ಲಿ ಪ್ರತಿಭಟನೆ
ಇನ್ನು ಪ್ರತಿಭಟನೆ ನಡೆಸಲು ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ಏರ್ಪಟ್ಟಿತ್ತು. ನಂತರ ಶ್ರೀಗಳು ಮಧ್ಯೆ ಪ್ರವೇಶಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.ನಂತರ ಮಾತನಾಡಿದ ಸಿದ್ದರಾಮೇಶ್ವರ ಶ್ರೀ, ಎಲ್ಲಾ ಶಾಸಕರ ಅಭಿಪ್ರಾಯ ತಿರಸ್ಕರಿಸಿ ಟಿಕೆಟ್ ನೀಡದೆ ಇದ್ದಲ್ಲಿ, ನೀವು ಉದ್ದೇಶ ಪೂರ್ವಕವಾಗಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಟಿಕೆಟ್ ನೀಡುತ್ತಿಲ್ಲ. ಜಿಲ್ಲೆಯ ಬಿಜೆಪಿ ಶಾಸಕರ ಅಭಿಪ್ರಾಯ ಪಡೆಯದೆ ಬಿಜೆಪಿ ಟಿಕೆಟ್ ನೀಡುತ್ತಿರುವುದು ಎಲ್ಲೋ ಆಂತರಿಕವಾಗಿ ನೀವೇ ನಿಮ್ಮ ಪಕ್ಷವನ್ನು ಸೋಲಿಸುವ ಹುನ್ನಾರ ನಡೆಸುತ್ತಿದ್ದೀರಿ ಅನ್ನೋ ಹಾಗಿದೆ. ಈಗಲೂ ಕಾಲ ಮಿಂಚಿಲ್ಲ. ಭೋವಿ ಸಮಾಜಕ್ಕೆ ಲೋಕ ಸಮರಕ್ಕೆ ಅವಕಾಶ ಕಲ್ಪಿಸಿ ಎಂದರು.

Intro:ಭೋವಿ ಸಮಾಜಕ್ಕೆ ಸಿಗದೆ ಬಿಜೆಪಿ ಟಿಕೆ ಟ್ : ಸಿದ್ದರಾಮೇಶ್ವರ ಶ್ರೀ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಚಿತ್ರದುರ್ಗ:- ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ನೀಡದ ಹಿನ್ನಲೆಯಲ್ಲಿ ಭೋವಿ ಗುರು ಪೀಠದ ಪೀಠಾಧಿಪತಿ ಶ್ರೀ ಸಿದ್ದರಾಮೇಶ್ವರ ಶ್ರೀ ಆಕ್ರೋಶಕ್ಕೆ ಕಾರಣವಾಗಿದೆ. ಟಿಕೆಟ್ ನೀಡುವುದಾಗಿ ಮಾತು ನೀಡಿದ್ದ ಮಾಜಿ ಸಿಎಂ ಯಡಿಯೂರಪ್ಪ ಮಾತಿಗೆ ತಪ್ಪಿದ್ದನ್ನು ಖಂಡಿಸಿ ಭೋವಿ ಸಮುದಾಯದವರು ನಗರದಲ್ಲಿ ಬೃಹತ್ ಪ್ರತಿಭಟನ ಮೆರವಣಿಗೆ ಹಮ್ಮಿಕೊಂಡು ಟಿಕೆಟ್ ನೀಡುವಂತೆ ಬಿಎಸ್ವೈ ರವರಿಗೆ ಒತ್ತಾಯಿಸಿದರು. ನಗರದ ಗಾಂಧಿ ವೃತ್ತದಿಂದ ಆರಂಭವಾದ ಪ್ರತಿಭಟನ ರ್ಯಾಲಿ ನಗರದ ಪ್ರವಾಸಿ ಮಂದಿರ ನಂತರ ಡಿಸಿ ವೃತ್ತಕ್ಕೆ ತಲುಪಿ ಮಾನವ ಸರಪಳಿ ನಿರ್ಮಾಣ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಪ್ರತಿಭಟನೆ ನಡೆಸಲು ಅನುಮತಿ ಪಡೆಯದ ಹಿನ್ನಲೆಯಲ್ಲಿ ಪ್ರತಿಭಟನಕಾರರ ಹಾಗೂ ಪೋಲಿಸರ ನಡುವೆ ವಾಗ್ವಾದ ಏರ್ಪಟ್ಟಿತ್ತು. ನಂತರ ಶ್ರೀಯರು ಮಧ್ಯೆ ಪ್ರವೇಶಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.

ನಂತರ ಮಾತನಾಡಿದ ಸಿದ್ದರಾಮೇಶ್ವರ ಶ್ರೀಯವರು ಎಲ್ಲಾ ಶಾಸಕರ ಅಭಿಪ್ರಾಯ ತಿರಸ್ಕಾರಿಸಿ ಟಿಕೆಟ್ ನೀಡದೆ ಇದ್ದಲಿ ನೀವು ಉದ್ದೇಶ ಪೂರ್ವಕವಾಗಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಟಿಕೆಟ್ ನೀಡುತ್ತಿಲ್ಲ. ಜಿಲ್ಲೆಯ ಬಿಜೆಪಿ ಶಾಸಕರ ಅಭಿಪ್ರಾಯ, ಮನ್ನಣ ಪಡೆಯದೆ ಬಿಜೆಪಿ ಟಿಕೆಟ್ ನೀಡುತ್ತಿರುವುದು ಎಲ್ಲೋ ಆಂತರಿಕವಾಗಿ ನೀವೆ ನಿಮ್ಮ ಪಕ್ಷವನ್ನು ಸೋಲಿಸುವ ಹುನ್ನಾರ ನಡೆಸುತ್ತಿದ್ದೀರಿ. ಈಗಲೂ ಕಾಲ ಮಿಂಚಿಲ್ಲ ಭೋವಿ ಸಮಾಜಕ್ಕೆ ಲೋಕ ಸಮರಕ್ಕೆ ಅವಕಾಶ ಕಲ್ಪಿಸಿ ಎಂದರು.
Body:bhoviConclusion:samaja

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.