ಚಿತ್ರದುರ್ಗ : ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಮ್ಮ ಇಲಾಖೆಯ ಬಗ್ಗೆ ಮಾಹಿತಿ ಇಲ್ಲದೆ, ಅಭಿವೃದ್ಧಿ ಕಾರ್ಯಗಳ ಕುರಿತು ಹೇಳಲು ತಡಬಡಾಯಿಸಿ ಚೀಟಿವೊಂದನ್ನು ನೋಡಿಕೊಂಡು ಮಾಹಿತಿ ನೀಡಿದ್ದಾರೆ. ಇದು ಮಾಡಿದ ಮಾಹಿತಿ ಕಾರ್ಯಗಳ ಬಗ್ಗೆ ಅವರಿಗೆ ಮಾಹಿತಿ ಇಲ್ಲವೇ ಎಂಬ ಪ್ರಶ್ನೆಗೆ ಕಾರಣವಾಗಿದೆ.
ಚಿತ್ರದುರ್ಗ ನಗರಕ್ಕೆ ಆಗಮಿಸಿದ್ದ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸುವ ಮುನ್ನ ಶಾಸಕ ತಿಪ್ಪಾರೆಡ್ಡಿ ಮನೆಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲಾಗದೆ ತಡಬಡಾಯಿಸಿ, ತಮ್ಮ ಆಪ್ತ ಸಹಾಯಕನಿಂದ ಮಾಹಿತಿ ಪಡೆದುಕೊಂಡರು.