ಚಿತ್ರದುರ್ಗ : ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಿದ ವಸತಿ ಸಚಿವ ವಿ ಸೋಮಣ್ಣ ಸಾಮಾಜಿಕ ಅಂತರ ಮರೆತು ಕಾರ್ಯಕರ್ತರ ಜೊತೆ ಸಭೆ ನಡೆಸಿದರು.
ಬಿಜೆಪಿ ಕಚೇರಿ ಬಳಿ ಆಗಮಿಸಿದ ವಸತಿ ಸಚಿವರು, ಕಾರ್ಯಕರ್ತರನ್ನು ಗುಂಪು ಗುಂಪಾಗಿ ಬರಮಾಡಿಕೊಂಡರು. ನಗರದ ಕೆಳಗೋಟೆ ಬಡಾವಣೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಈ ಘಟನೆ ನಡೆದಿದೆ.
ಜನಪ್ರತಿನಿಧಿಗಳು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು, ನಂತರ ಜನ ಸಾಮಾನ್ಯರಿಗೆ ಪಾಠ ಹೇಳಬೇಕೆ ವಿನಾಃ ಜನಪ್ರತಿನಿಧಿಗಳು ಸಾಮಾಜಿಕ ಅಂತರ ಕಾಪಾಡದೆ ಕಾರ್ಯಕ್ರಮಗಳಲ್ಲಿ ಭಾಗಿಯಾದರೆ ಜನ ಸಾಮಾನ್ಯರಿಗೆ ತಿಳಿ ಹೇಳುವವರು ಯಾರು ಎನ್ನುವ ಪ್ರಶ್ನೆ ಮೂಡುತ್ತಿದೆ.