ಚಿತ್ರದುರ್ಗ: ಕೈನಾಯಕರು ಶಿವಮೊಗ್ಗ ಜಿಲ್ಲೆ ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಶ್ರೀ ರಾಮುಲು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಚಿತ್ರದುರ್ಗ ತಾಲೂಕಿನ ಬೆಳಗಟ್ಟ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಜೆಟ್ ಸೇರಿ ಯಾವುದೇ ವಿಚಾರದಲ್ಲಿ ಚರ್ಚೆಗೆ ಬರಲಿಲ್ಲ. ಈಗ ಭದ್ರಾವತಿಯಲ್ಲಿ ಧರಣಿ ಮಾಡಲು ಮುಂದಾಗಿದ್ದಾರೆ. ಕಾಂಗ್ರೆಸ್ ನಾಯಕರ ಆಟ ಈಗ ನಡೆಯುವುದಿಲ್ಲ ಎಂದು ಕೈ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಭದ್ರಾವತಿ ಶಾಸಕ ಸಂಗಮೇಶ ಪುತ್ರನ ವಿರುದ್ದ ಕಾನೂನು ಕ್ರಮದ ವಿಚಾರದಲ್ಲಿ ಬಿಜೆಪಿ ಸೇಡಿನ ರಾಜಕಾರಣ ಮಾಡಿಲ್ಲ. ಆದ್ರೆ ಸಿದ್ದರಾಮಯ್ಯನ ಸರ್ಕಾರದ ಅವಧಿಯಲ್ಲಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಸಚಿವ ಶ್ರೀರಾಮುಲು ದೂರಿದರು. ಇತ್ತ ಡಿಕೆಶಿ, ಸಿದ್ದರಾಮಯ್ಯ ಶ್ರೀರಾಮನ ಹೆಸರು ಸಹಿಸುವುದಿಲ್ಲ ಅಂತಾರೆ. ಬಿಜೆಪಿ ರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತದೆ. ಕಾಂಗ್ರೆಸ್ ನಾಯಕರು ಬೌದ್ದಿಕವಾಗಿ, ನೈತಿಕವಾಗಿ ದಿವಾಳಿಯಾಗಿದ್ದಾರೆ ಎಂದು ಲೇವಡಿ ಮಾಡಿದರು.
ಇನ್ನು ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಿ, ಮಹಾನ್ ವ್ಯಕ್ತಿ ಯಾರು ಎಂಬುದು ನನಗೆ ಗೊತ್ತಿಲ್ಲ. ಜಾರಕಿಹೊಳಿ ಆರೋಪ ಮುಕ್ತರಾಗಿ ಹೊರ ಬರುತ್ತಾರೆ ಎಂಬ ವಿಶ್ವಾಸವಿದೆ ಎಂದರು. ಇನ್ನು ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಮೆರೆಯುತ್ತಿರುವುದು ಸರಿಯಲ್ಲ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕೆಣಕುತ್ತಾರೆ. ಒಂದಿಚ್ಚು ಜಾಗ ಬಿಟ್ಟುಕೊಡುವುದಿಲ್ಲ. ರಾಗಿ ಕಾಳಿನಷ್ಟು ಜಾಗ ಬಿಟ್ಟು ಕೊಡುವ ಮಾತೇ ಇಲ್ಲ ಎಂದು ಸಚಿವ ಶ್ರೀ ರಾಮುಲು ಎಂಇಎಸ್‌ಗೆ ಖಡಕ್ ಎಚ್ಚರಿಕೆ ನೀಡಿದರು.
ಓದಿ: ಇಂದು ಶಿವಮೊಗ್ಗಕ್ಕೆ ಕಾಂಗ್ರೆಸ್ ನಾಯಕರ ದಂಡು: ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ