ಚಿತ್ರದುರ್ಗ : ಹೆಚ್ ವಿಶ್ವನಾಥ್, ಆರ್ ಶಂಕರ್, ಎಂಟಿಬಿ ನಾಗಾರಾಜ್, ರೋಷನ್ ಬೇಗ್ ಅವರಿಗೆ ವಿಧಾನ ಪರಿಷತ್ನಲ್ಲಿ ಅವಕಾಶ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಬಿ ಎಸ್ಯಡಿಯೂರಪ್ಪ ಅವರ ಬಳಿ ಮಾತನಾಡಿದ್ದೇವೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಸ್ಪಷ್ಟಪಡಿಸಿದರು.
ಸಚಿವ ಸಂಪುಟದಲ್ಲಿ ಈ ವಿಚಾರದ ಬಗ್ಗೆ ಎಲ್ಲಾ ಮಂತ್ರಿಗಳ ಗಮನಕ್ಕೂ ತರಲಾಗಿದೆ. ಸೋಮವಾರ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಅವರ ಹೆಸರುಗಳನ್ನು ಶಿಫಾರಸು ಮಾಡಬಹುದಾದ ಸಾಧ್ಯತೆ ಇದೆ ಎಂದರು. ನಾಲ್ವರ ಹೆಸರು ಪ್ರಸ್ತಾಪಿಸಿ ಅವಕಾಶ ಕಲ್ಪಿಸಿ ಕೊಡಿ ಎಂದು ಕೋರ್ ಕಮಿಟಿಯ ಸದಸ್ಯರಾಗಿರುವ ಸಚಿವ ಕೆ ಎಸ್ ಈಶ್ವರಪ್ಪ ಅವರಲ್ಲೂ ಮನವಿ ಮಾಡಿಕೊಳ್ಳಲಾಗಿದೆ ಎಂದರು.
ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ನಾಲ್ವರೂ ಕೂಡ ಕಾರಣಕರ್ತರು. ಪ್ರತಾಪ್‌ಗೌಡ ಪಾಟೀಲ್, ಮುನಿರತ್ನ ಚುನಾವಣೆ ಎದುರಿಸಲಿದ್ದಾರೆ. ನಮಗೆ ಮಾತು ಕೊಟ್ಟಂತೆ ಮಂತ್ರಿ ಮಾಡಿದ್ದಾರೆ. ಅವರನ್ನು ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.