ಚಿತ್ರದುರ್ಗ: ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ಗೆ ಕೊರೊನಾ ಸೋಂಕು ದೃಢವಾಗಿದ್ದು, ಹೋಂ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಲ್ಲರೂ ಮಾಸ್ಕ್ ಧರಿಸಿ,ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಹಾಗೂ ಕೊರೊನಾ ನಿಯಮಾವಳಿಗಳನ್ನು ಪಾಲಿಸುವಂತೆ ಗೂಳಿಹಟ್ಟಿ ಜನರಲ್ಲಿ ಮನವಿ ಮಾಡಿಕೊಂಡರು.
ಸ್ವಲ್ಪ ದಿನಗಳ ಕಾಲ ಯಾರೂ ಕಚೇರಿ ಹಾಗೂ ಮನೆಯ ಕಡೆ ಬರಬೇಡಿ, ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಬಗೆಹರಿಸುತ್ತೇನೆ ಎಂದು ತಮ್ಮ ಮತಕ್ಷೇತ್ರದ ಜನರಿಗೆ ಸಂದೇಶ ರವಾನಿಸಿದ್ದಾರೆ. ಇನ್ನು ಕಳೆದ ಒಂದು ವಾರದಿಂದ ನನ್ನ ಜೊತೆಗೆ ಸಂಪರ್ಕದಲ್ಲಿದ್ದವರು ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ. ಯಾರೂ ಕೂಡ ಅನಾವಶ್ಯಕವಾಗಿ ವಿನಾಕಾರಣ ಅಡ್ಡಾಡಬೇಡಿ ಎಂದು ವಿಡಿಯೋ ಮೂಲಕ ಮನವಿ ಮಾಡಿದರು.