ಚಿತ್ರದುರ್ಗ: ಸರ್ಕಾರಿ ಪದವಿ ಕಾಲೇಜು ಸ್ಥಳಾಂತರ ವಿರೋಧಿಸಿ ಕಾಂಗ್ರೆಸ್ ಶಾಸಕ ಟಿ.ರಘುಮೂರ್ತಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನಾ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.
ತಾಲೂಕಿನ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ತುರವನೂರು ಗ್ರಾಮದ ಸರ್ಕಾರಿ ಪದವಿ ಕಾಲೇಜು ಅನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಸ್ಥಳಾಂತರ ಮಾಡಿರುವುದನ್ನು ಖಂಡಿಸಿ ನಡೆಯುತ್ತಿರುವ ಹೋರಾಟಕ್ಕೆ ಕನ್ನಡ ಪರ ಸಂಘಟನೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬೆಂಬಲ ನೀಡಿವೆ.
ನಗರದ ಜಿಲ್ಲಾಧಿಕಾರಿ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಸ್ಥಳಾಂತರ ಮಾಡದಂತೆ ಮನವಿ ಮಾಡಿದರು. ಈ ಪ್ರತಿಭಟನೆಯಲ್ಲಿ ಪಾಲಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕೂಡಲೇ ಆದೇಶ ಹಿಂಪಡೆಯುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ರಾಮುಲು ಈ ವಿಚಾರವಾಗಿ ಮೌನ ವಹಿಸಿರುವುದಕ್ಕೆ ವಿದ್ಯಾರ್ಥಿಗಳು ಸೇರಿದಂತೆ ಶಾಸಕ ರಘುಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.