ETV Bharat / state

ಶಾಸಕ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರ ಆಗ್ರಹ

ಬಿಜೆಪಿ ಹಿರಿಯ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿಯವರು 6 ಬಾರಿ ಆಯ್ಕೆಯಾಗಿದ್ದಾರೆ. ತಿಪ್ಪಾರೆಡ್ಡಿ ಶಾಸಕರಾದ ಬಳಿಕ ಚಿತ್ರದುರ್ಗ ನಗರ ಸಭೆಯಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ವೇಳೆ ತಿಪ್ಪಾರೆಡ್ಡಿಯವರನ್ನು ಪರಿಗಣಿಸಿ ಸಚಿವ ಸ್ಥಾನ ನೀಡುವಂತೆ ಸಿಎಂ ಬಿಎಸ್​ವೈಗೆ ತಿಪ್ಪಾರೆಡ್ಡಿ ಬೆಂಬಲಿಗರು ಒತ್ತಾಯಿಸಿದರು.

MLA Thippareddy support demands for ministers Post
ಶಾಸಕ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರಿಂದ ಒತ್ತಾಯ
author img

By

Published : Feb 2, 2020, 3:18 PM IST

ಚಿತ್ರದುರ್ಗ: ಹಿರಿಯ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಗರಸಭೆ ಸದಸ್ಯ ಶ್ರೀನಿವಾಸ್ ಮಾತನಾಡಿ, ಜಿ.ಹೆಚ್. ತಿಪ್ಪಾರೆಡ್ಡಿಯವರು 6 ಬಾರಿ ಆಯ್ಕೆಯಾಗಿರುವ ಹಿರಿಯ ಶಾಸಕ. ತಿಪ್ಪಾರೆಡ್ಡಿ ಶಾಸಕರಾದ ಬಳಿಕ ನಗರ ಸಭೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ವೇಳೆ ತಿಪ್ಪಾರೆಡ್ಡಿಯವರನ್ನು ಪರಿಗಣಿಸಿ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದರು.

ಶಾಸಕ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಬೆಂಬಲಿಗರ ಆಗ್ರಹ

ಹಿರಿತನದ ಆಧಾರದ ಮೇಲೆ ಸಚಿವ‌ ಸ್ಥಾನ ಕೊಡಬೇಕೆ ಹೊರತು, ಜಾತಿ ಆಧಾರದ ಮೆಲೆ ಕೊಡಬಾರದು. ತಿಪ್ಪಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡದೆ ಇದ್ರೆ, ನಗರಸಭೆ, ತಾಲೂಕು ಪಂಚಾಯತ್​ ಜಿಲ್ಲಾ ಪಂಚಾಯತ್​, ಗ್ರಾಮ ಪಂಚಾಯತ್​ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಬಿಜೆಪಿ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಲು ಸಿದ್ಧರಿದ್ದೇವೆ ಎಂದು ಎಚ್ಚರಿಸಿದರು. ತಿಪ್ಪಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರು ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆಯನ್ನೂ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.