ETV Bharat / state

ಸಾರ್ವಜನಿಕ ಸ್ಥಳಗಳಲ್ಲಿ ಮೊಹರಂ ಆಚರಣೆ ನಿಷೇಧ: ಡಿಸಿ ಆದೇಶ - Moharam celebration guide lines

ರಾಜ್ಯದಲ್ಲಿ ಕೊವಿಡ್ -19 ಸಾಂಕ್ರಾಮಿಕ ರೋಗ ಹರಡುತ್ತಿರುವುದರಿಂದ ಮೊಹರಂ ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚಿಸಿದ್ದಾರೆ.

Chitradurgha dc
Chitradurgha dc
author img

By

Published : Aug 27, 2020, 4:49 PM IST

ಚಿತ್ರದುರ್ಗ: ಸಾರ್ವಜನಿಕ ಸ್ಥಳಗಳಲ್ಲಿ ಮೊಹರಂ ಹಬ್ಬದ ಆಚರಣೆಗೆ ನಿಷೇಧ ಹೇರಲಾಗಿದ್ದು, ಈ ಕುರಿತು ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚಿಸಿದ್ದಾರೆ.

ಜುಲೈ 29 ರಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತೆರವು-3 ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಧಾರ್ಮಿಕ ಕಾರ್ಯಗಳು ಮತ್ತು ಇತರ ಬೃಹತ್ ಸಭೆಗಳನ್ನು ಆಗಸ್ಟ್ 31 ರವರೆಗೆ ನಿರ್ಬಂಧಿಸುವಂತೆ ತಿಳಿಸಲಾಗಿದೆ.

ಜೊತೆಗೆ ರಾಜ್ಯದಲ್ಲಿ ಕೊವಿಡ್-19 ಸಾಂಕ್ರಾಮಿಕ ರೋಗ ಹರಡುತ್ತಿರುವುದರಿಂದ ಮೊಹರಂ ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಯು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಹಬ್ಬ ಆಚರಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.