ಚಿತ್ರದುರ್ಗ: ಊಟ ಸೇವಿಸಿದ ಬಳಿಕ 15ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ (Morarji Desai residential school)ನಡೆದಿದೆ.
ವಸತಿ ಶಾಲೆಯಲ್ಲಿನ ಮಕ್ಕಳಲ್ಲಿ ಸುಮಾರು15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಬೇಧಿಯಾಗಿದ್ದು, ತಕ್ಷಣ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟೇ ಅಲ್ಲದೆ ಬೆಳಗ್ಗೆ ಕೂಡ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರೆಲ್ಲರನ್ನು ಆಸ್ಪತ್ರೆಗೆ ಕರೆತರಲಾಗಿದೆ. ಯಾವುದೇ ಪ್ರಾಣಾಪಾಯವಿಲ್ಲ, ಮಕ್ಕಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಆಸ್ಪತ್ರೆ ಅವ್ಯವಸ್ಥೆ:
ತಾಲೂಕು ಆಸ್ಪತ್ರೆಯಲ್ಲಿ ಮಕ್ಕಳ ಚಿಕಿತ್ಸೆಗೆ ಸೂಕ್ತ ಬೆಡ್ಗಳ ವ್ಯವಸ್ಥೆ ಇಲ್ಲದ ಹಿನ್ನೆಲೆ ನೆಲದಲ್ಲಿಯೇ ಮಲಗಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ:ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್.. POCSO ಕಾಯ್ದೆಯಡಿ ಶಿಕ್ಷಕ ಅರೆಸ್ಟ್