ಚಿತ್ರದುರ್ಗ: ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಗಮನ ಹರಿಸಿಬೇಕೆಂದು ವಾರ್ತಾ ಸಚಿವ ಸಿ.ಸಿ.ಪಾಟೀಲ್ ಚಿತ್ರಮಂದಿರದ ಮಾಲೀಕರಿಗೆ ಮನವಿ ಮಾಡಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ತೆರಳಿದ್ದ ವೇಳೆ ಮಾತನಾಡಿದ ಅವರು, ಕೊರೊನಾ ಪ್ರಕರಣಗಳು ಹೆಚ್ಚಾದರೆ ಮೊದಲು ಚಿತ್ರಮಂದಿರಗಳ ಮೇಲೆ ಪ್ರಭಾವ ಬೀರುತ್ತದೆ. ಸದ್ಯ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶವನ್ನು ನೀಡಲಾಗಿದೆ. ಚಿತ್ರಮಂದಿಗಳ ಮಾಲೀಕರಿಗೆ ಮತ್ತೆ ಶೇ. 50 ರಷ್ಟು ಅವಕಾಶವನ್ನು ಸರ್ಕಾರ ನೀಡುತ್ತದೆ ಎಂಬ ಆತಂಕ ಇತ್ತು. ಆದರೆ ಸಚಿವರು ಯಾವುದೇ ಭಯ, ಆತಂಕ ಬೇಡ. ಚಿತ್ರಮಂದಿರಗಳಲ್ಲಿ ಶೇ. 50 ಕ್ಕೆ ಇಳಿಕೆ ಮಾಡುವುದಿಲ್ಲ ಎಂದು ಭರವಸೆ ನೀಡಿದರು.
ಆದರೆ,ಚಿತ್ರಮಂದಿರಗಳ ಮಾಲೀಕರು ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಆಗಾಗ ಮಂದಿರಗಳನ್ನು ಸ್ಯಾನಿಟೈಸ್ ಮಾಡಬೇಕು ಎಂದು ಸೂಚನೆ ನೀಡಿದರು.