ETV Bharat / state

ಚಿತ್ರದುರ್ಗ: ಇಬ್ಬರು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ತಾಯಿ ಆತ್ಮಹತ್ಯೆ

ಚಿತ್ರದುರ್ಗ ಜಿಲ್ಲೆಯಲ್ಲಿ ಇಬ್ಬರು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Mother committed suicide after drowning her two children in a water tank

author img

By ETV Bharat Karnataka Team

Published : Dec 8, 2023, 1:59 PM IST

Updated : Dec 8, 2023, 7:15 PM IST

ಚಿತ್ರದುರ್ಗ: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಬಳಿಕ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಯಾದಲಘಟ್ಟ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ತಾಯಿ ಲತಾ(25), ಮಗಳು ಪ್ರಣೀತಾ(5), ಪುತ್ರ ಜ್ಞಾನೇಶ್ವರ ಮೃತರು. ಆತ್ಮಹತ್ಯೆಗೆ ಈವರೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪತಿ ತಿಪ್ಪೇಸ್ವಾಮಿ ಬೆಳಗ್ಗೆ ಎಂದಿನಂತೆ ಜಮೀನಿಗೆ ತೆರಳಿದ್ದರು. ಗ್ರಾಮಸ್ಥರಿಂದ ವಿಷಯ ತಿಳಿದು ಮನೆಗೆ ಧಾವಿಸಿ, ಗಮನಿಸಿದಾಗ ಪತ್ನಿ ಲತಾ ಹಾಗೂ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೃತ ಮಹಿಳೆಗೆ ತಂದೆ-ತಾಯಿ ಯಾರು ಇಲ್ಲ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯಕ್ಕೆ ಯಾವುದೇ ದೂರು ಕೂಡ ದಾಖಲಾಗಿಲ್ಲ. ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆಕೆಯ ಪತಿಯನ್ನು ಕರೆದು ಪ್ರಾಥಮಿಕ ಹಂತದ ವಿಚಾರಣೆ ನಡೆಸಿ ಕಳಿಸಿಕೊಡಲಾಗಿದೆ. ಯಾವುದೇ ದೂರು ನೀಡದಿದ್ದರೆ ಅಸ್ವಾಭಾವಿಕ ಸಾವು ಎಂದು ಪರಿಗಣಿಸಲಾಗುವುದು ಎಂದು ಚಳ್ಳಕೆರೆ ಪೊಲೀಸ್​ ಠಾಣೆಯ ಸಿಪಿಐ ದೇಸಾಯಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ವಿಜಯನಗರ: ಮಗಳ ಕೊಲೆ ಮಾಡಿ ತಾಯಿ ಆತ್ಮಹತ್ಯೆ, ಮಗ ಆಸ್ಪತ್ರೆಗೆ ದಾಖಲು

Last Updated : Dec 8, 2023, 7:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.