ಚಿತ್ರದುರ್ಗ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದ ಹಿನ್ನೆಲೆ ಚಿತ್ರದುರ್ಗದ ಸಂಸದರಾದ ಬಿ.ಎನ್. ಚಂದ್ರಪ್ಪ ಹಾಗೂ ದಾವಣಗೆರೆ ಸಂಸದರಾದ ಜಿ.ಎಂ. ಸಿದ್ದೇಶ್ವರ ಅವರು ಹೊಸದುರ್ಗದ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ, ಶ್ರೀಯವರ ಆಶೀರ್ವಾದ ಪಡೆದರು.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ನಗದಲ್ಲಿರುವ ಕುಂಚಿಟಿಗ ಮಠಕ್ಕೆ ಭೇಟಿ ನೀಡಿದ ಇಬ್ಬರು ಸಂಸದರು ಡಾ.ಶ್ರೀ ಶಾಂತವೀರ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆದಿರುವುದು ಕಮಲ ಹಾಗೂ ಕೈ ಪಾಳಯದಲ್ಲಿ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.
ಇನ್ನೂ ಆಶೀರ್ವಾದಿಸಿದ ಬಳಿಕ ಶ್ರೀಯವರು ಇಬ್ಬರು ಸಂಸದರನ್ನು ಸನ್ಮಾಸಿದ್ದಾರೆ. ಇದೇ ವೇಳೆ ಪರಮ ಪೂಜ್ಯ ಶ್ರೀ ಈಶ್ವರಾನಂದಪುರಿ ಸ್ವಾಮಿಜೀಯವರು ಕೂಡ ಭಾಗಿಯಾಗಿದ್ದರು.