ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾಶ್ರೀ ಅವರಿಗೆ ಹೃದಯ ಸಮಸ್ಯೆ ಕಾಯಿಲೆ ಇರುವ ಹಿನ್ನೆಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲು ಚಿತ್ರದುರ್ಗ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಸೂಚನೆ ನೀಡಿದೆ. ಸೆಷನ್ಸ್ ನ್ಯಾಯಾಲಯ ಜಿಲ್ಲಾ ಕಾರಾಗೃಹದ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಶ್ರೀಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲು ತಯಾರಿ ಮಾಡಲಾಗುತ್ತಿದೆ.
ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾಶ್ರೀ ಸಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ. ಮುರುಘಾಶ್ರೀ ಅವರಿಗೆ ಕರೊನರಿ ಎಂಜಿಯೋಗ್ರಾಮ್ ಮಾಡಿಸಲು ಅನುಮತಿ ನೀಡಲು ಮುರುಘಾಶ್ರೀ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಇದನ್ನೂ ಓದಿ : ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ