ಚಿತ್ರದುರ್ಗ: ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ ಸೆ. 27ರವರೆಗೆ ವಿಸ್ತರಿಸಿದೆ. ಸ್ವಾಮೀಜಿಯ ನ್ಯಾಯಾಂಗ ಬಂಧನ ಬುಧವಾರ ಅಂತ್ಯಗೊಳ್ಳಲಿರುವ ಹಿನ್ನೆಲೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಇಂದು ಹಾಜರು ಪಡಿಸಲಾಗಿತ್ತು.
ನ್ಯಾಯಾಲಯದ ನ್ಯಾಯಾಧೀಶೆ ಬಿ ಕೆ ಕೋಮಲಾ ಅವರು ಪ್ರಕರಣದ ವಿಚಾರಣೆ ನಡೆಸಿ, ಮತ್ತೆ 14 ದಿನಕ್ಕೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ಮಾಡಿದ್ದಾರೆ. ಸೆಪ್ಟೆಂಬರ್ 1 ರ ರಾತ್ರಿ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ನಂತರ ಸೆ. 2 ರಂದು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಯಿತು. ನಂತರ ಅದೇ ನ್ಯಾಯಾಲಯದಿಂದ ಸೆ. 14 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಅವರನ್ನು ಚಿತ್ರದುರ್ಗದ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ.
ಪೋಕ್ಸೊ ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಶರಣರು ಆರೋಪ ಎದುರಿಸುತ್ತಿದ್ದಾರೆ.
ಇದನ್ನೂ ಓದಿ: ಮುರುಘಾ ಮಠದ ಶಿವಮೂರ್ತಿ ಶ್ರೀಗಳಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ
ಕಿರುಕುಳ ಆರೋಪ ಪ್ರಕರಣದಲ್ಲಿ ಅವರು ಮತ್ತು ಇತರ ನಾಲ್ವರು ಆರೋಪಿಗಳಾಗಿದ್ದಾರೆ. ಮೈಸೂರಿನ ಒಡನಾಡಿ ಸೇವಾ ಸಂಸ್ಥೆ ಎಂಬ ಎನ್‌ಜಿಒ ದೂರು ದಾಖಲಿಸಿದ್ದು, ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾಯಿಸಲಾಗಿತ್ತು.