ಚಿತ್ರದುರ್ಗ: 2ನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.
ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಅ.13ರಂದು ಪ್ರಕರಣ ದಾಖಲಾಗಿತ್ತು. ಅ.14ಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ, ಮೊದಲನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುರುಘಾ ಶರಣರು ಜೈಲಿನಲ್ಲಿದ್ದ ಹಿನ್ನೆಲೆಯಲ್ಲಿ ದಾಖಲಾಗಿದ್ದ ೨ನೇ ಪ್ರಕರಣದ ವಿಚಾರಣೆ ನಡೆಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 8 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು.
ಆದರೆ, ಇದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಮುರುಘಾ ಶರಣರ ಪರ ವಕೀಲರು ವಾದ ಮಂಡಿಸಿದ್ದರು. ವಾದ - ಪ್ರತಿವಾದ ಆಲಿಸಿದ ನ್ಯಾಯಾಲವು, ಮುರುಘಾ ಶರಣರನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದು, ನವೆಂಬರ್ 5ರವರೆಗೆ ವಿಚಾರಣೆ ನಡೆಸಲು ಅನುಮತಿ ನೀಡಿದೆ. ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ವಿಚಾರಣೆ ಆರಂಭವಾಗಿದೆ.
ಇದನ್ನೂ ಓದಿ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್: ಕೋರ್ಟ್ನಲ್ಲಿ ಸಂತ್ರಸ್ತ ಬಾಲಕಿಯರಿಂದ ಹೇಳಿಕೆ ದಾಖಲು