ಚಿತ್ರದುರ್ಗ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷೆಗೂ ಮೀರಿದ ಬಹುಮತ ಬಂದಿದ್ದು, ಸರ್ಕಾರ ರಚನೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ಮೋದಿ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ದೆಹಲಿ ಸಂಸತ್ ಭವನ ಇದಕ್ಕೆ ಸಾಕ್ಷಿಯಾಗಲಿದೆ.
ಚಿತ್ರದುರ್ಗದಲ್ಲಿರುವ ನರೇಂದ್ರ ಮೋದಿ ಅಭಿಮಾನಿಗಳು ಲಾಡು ಹಂಚುವ ಮೂಲಕ ಅಭಿಮಾನ ಮೆರೆದಿದ್ದಾರೆ. ಜಿಲ್ಲಾ ಕ್ರೀಡಾಂಗಣದಲ್ಲಿ ವಾಯುವಿಹಾರಕ್ಕೆ ಆಗಮಿಸುವ ವಾಯು ವಿಹಾರಿಗಳಿಗೆ ಸಿಹಿ ಹಂಚುವ ಮೂಲಕ ಸಂಭ್ರಮಿಸಿದ್ದಾರೆ.
ನಮೋ ಅಭಿಮಾನಿಗಳು ಮಹಿಳೆಯರಿಗೆ, ಮಕ್ಕಳಿಗೆ ಸಿಹಿ ಹಂಚುವ ಮೂಲಕ ಮೋದಿ ಪ್ರಮಾಣ ವಚನಕ್ಕೆ ಸಂಸತ ವ್ಯಕ್ತಪಡಿಸಿದ್ದಾರೆ.