ಚಿತ್ರದುರ್ಗ: ಜಿಲ್ಲೆಯಲ್ಲಿ 43 ಜನ ವಿದೇಶಕ್ಕೆ ಹೋಗಿ ಬಂದಿದ್ದು, ಅವರನ್ನು ಒಳಗೊಂಡಂತೆ ನಮ್ಮ ಜಿಲ್ಲೆಯಲ್ಲಿ ಯಾರಿಗೂ ಕೊರೊನಾ ಸೋಂಕು ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ನಮ್ಮ ಜಿಲ್ಲೆಯಲ್ಲಿ ಎಲ್ಲೂ ಸೋಂಕು ಪತ್ತೆಯಾಗಿಲ್ಲ. ವಿದೇಶದಿಂದ ಮರಳಿರುವ 43 ಜನರ ಮೇಲೆ ನಿಗಾ ವಹಿಸಲಾಗಿದ್ದು, ಈಗಾಗಲೇ ತಪಾಸಣೆ ಕೂಡ ನಡೆಸಲಾಗಿದೆ. ಅವರಲ್ಲಿ ಯಾರಿಗೂ ಸೋಂಕು ಪತ್ತೆಯಾಗಿಲ್ಲ ಎಂದು ತಿಳಿಸಿದರು.
ಇನ್ನು ಜಿಲ್ಲೆಯಲ್ಲಿ ಜಾತ್ರೆಗಳನ್ನ ನಡೆಸದಂತೆ ಸೂಚನೆ ನೀಡಲಾಗಿದೆ. ಹಾಗೆ ಪ್ರವಾಸೋದ್ಯಮ ಸ್ಥಳಗಳ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಸಾರ್ವಜನಿಕರಿಗೆ ಯಾರಲ್ಲಾದರೂ ಸೋಂಕು ಲಕ್ಷಣ ಕಂಡು ಬಂದರೆ ಕೂಡಲೇ ನಮ್ಮನ್ನ ಸಂಪರ್ಕಿಸಿ ಮನವಿ ಮಾಡಿದರು.