ಚಿತ್ರದುರ್ಗ: ಕೋವಿಡ್ ನಿಯಂತ್ರಣಕ್ಕಾಗಿ ಸಂಡೇ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಮಾಸ್ಕ್ ಧರಿಸದೆ ಬೀದಿಗಿಳಿದ ಜನರಿಗೆ ನಗರಸಭೆ ಅಧಿಕಾರಿಗಳು ದಂಡ ವಿಧಿಸಿ ಬಿಸಿ ಮುಟ್ಟಿಸಿದರು.
ಕೊರೊನಾ ವೈರಸ್ ನಿಂದ ರಕ್ಷಿಸಿಕೊಳ್ಳಲು ಮಾಸ್ಕ್ ಧರಿಸುವಂತೆ ನಗರಸಭೆ ಅಧಿಕಾರಿಗಳು ಮನವಿ ಮಾಡಿದ್ರೂ ಕೂಡ ಚಿತ್ರದುರ್ಗ ನಗರದ ಗಾಂಧಿ ವೃತ್ತದ ಬಳಿ ದ್ವಿಚಕ್ರ ವಾಹನಗಳ ಮೂಲಕ ಮಾಸ್ಕ್ ಧರಿಸದೆ ಆಗಮಿಸುತ್ತಿದ್ದವರಿಗೆ ನಗರಸಭೆ ಅಧಿಕಾರಿಗಳು ದಂಡ ವಿಧಿಸಿ ಶಾಕ್ ನೀಡಿದರು.
ದಂಡ ವಿಧಿಸುವ ಜೊತೆಗೆ ಅನಗತ್ಯವಾಗಿ ಹೊರಗಡೆ ಓಡಾಡದಂತೆ ಮನೆಯಲ್ಲಿಯೇ ಇದ್ದು ಕೊರೊನಾ ನಿಯಂತ್ರಣಕ್ಕೆ ಸಹಕರಿಸಿ ಎಂದು ಮನವಿ ಮಾಡಿದರು.