ಚಿತ್ರದುರ್ಗ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ರಘುಮೂರ್ತಿ ಸಹೋದರನ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ.
ಬೈಕ್ ಸವಾರ ಪಾಪೇಶ್(22) ಮೃತ. ಕಳೆದ 5 ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ಎಂದು ತಿಳಿದುಬಂದಿದೆ. ಜಿಲ್ಲೆಯ ಬೆಳಗಟ್ಟ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಕಾರು ಮಾಲೀಕ ತಿಪ್ಪೇಸ್ವಾಮಿ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿದ್ದು, ಅಪಘಾತದ ಬಳಿಕ ನಾಪತ್ತೆಯಾಗಿದ್ದಾನೆ.
ತುರವನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.