ಚಿತ್ರದುರ್ಗ: ಸರಣಿ ಅಪಘಾತವಾದ ಹಿನ್ನೆಲೆ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್ ಬಳಿ ನಡೆದಿದೆ.
ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರುಗಳು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತ ಪಟ್ಟಿದ್ದಾರೆ. ಮೃತ ವ್ಯಕ್ತಿಯ ವಿಳಾಸವನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.
ಇನ್ನು ಗಾಯಾಳುಗಳನ್ನು ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.