ಚಿತ್ರದುರ್ಗ : ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಗ್ರಾಮದ ಬಳಿ ನಡೆದಿದೆ.
ಮೊಳಕಾಲ್ಮೂರು ಮೂಲದ ಹೊನ್ನೂರಪ್ಪ( 40) ಎಂಬುವರು ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ. ಇನ್ನೋರ್ವನಿಗೆ ತೀವ್ರ ಗಾಯಗಾವಾಗಿದ್ದು, ಚಳ್ಳಕೆರೆ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೇಗವಾಗಿ ಬಂದ ಲಾರಿ, ನಿಂತಿದ್ದ ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ:ಕೋಟೆನಾಡಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಒಂದು ಬಿಂದಿಗೆ ನೀರಿಗೂ ಪರದಾಟ!
ತಡರಾತ್ರಿ ಈ ಅಪಘಾತ ಸಂಭವಿಸಿದೆ. ಅಪಘಾತವಾದ ಸ್ಥಳಕ್ಕೆ ಚಳ್ಳಕೆರೆ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.